ಸುದ್ಧಿಕನ್ನಡ ವಾರ್ತೆ
ಪಣಜಿ(ಬಿಚೋಲಿ): ಗೋವಾದ ಬಿಚೋಲಿಯ ಮಾರುಕಟ್ಟೆ ಪ್ರದೇಶದಲ್ಲಿ ನಿಲ್ಲಿಸಲಾಗಿದ್ದ ಜೀಪ್ ನಲ್ಲಿ ಶುಕ್ರವಾರ ಬೆಳಿಗ್ಗೆ 55 ವರ್ಷದ ಮಹಿಳೆಯ ಮೃತದೇಹ ಪತ್ತೆಯಾಗಿದ್ದು , ಈ ಭಾಗದಲ್ಲಿ ಆತಂಕ ನಿರ್ಮಾವಾಗಿದೆ. ಇದು ಮಹಿಳೆಯ ಕೊಲೆಯಾಗಿರಬಹುದು ಎಂದು ಶಂಕಿಸಲಾಗುತ್ತಿದ್ದು ಬಿಚೋಲಿ ಪೋಲಿಸರು ಹಾಗೂ ಫಾರೆನ್ಸಿಕ್ ತಂಡ ಘಟನಾ ಸ್ಥಳಕ್ಕೆ ಆಗಮಿಸಿ ಮಾಹಿತಿ ಕಲೆಹಾಕಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೋಲಿಸರು ವೃಕ್ತಿಯೋರ್ವನನ್ನು ಬಂಧಿಸಿದ್ದು ತನಿಖೆ ಆರಂಭಿಸಿದ್ದಾರೆ.

ಈ ಮಹಿಳೆಯ ಗುರುತು ಇದುವರೆಗೂ ಪತ್ತೆಯಾಗಿಲ್ಲ, ಸಾವಿಗೆ ಕಾರಣ ಕೂಡ ತಿಳಿದುಬಂದಿಲ್ಲ. ಮರಣೋತ್ತರ ಪರೀಕ್ಷೆಯ ನಂತರ ಹೆಚ್ಚಿನ ಮಾಹಿತಿ ಲಭ್ಯವಾಗಲಿದೆ ಎಂದು ಪೋಲಿಸರು ಮಾಹಿತಿ ನೀಡಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೋಲಿಸರು ಒಬ್ಬ ವ್ಯಕ್ತಿಯನ್ನು ಬಂಧಿಸಿದ್ದಾರೆ. ಶುಕ್ರವಾರ ಬೆಳಿಗ್ಗೆ ಈ ಮೃತದೇಹ ಪತ್ತೆಯಾದ ನಂತರ ಬಿಚೋಲಿ ಮಾರುಕಟ್ಟೆ ಪ್ರದೇಶದಲ್ಲಿ ಆತಂಕದ ವಾತಾವರಣ ಸೃಷ್ಠಿಯಾಗಿತ್ತು.