ಸುದ್ಧಿಕನ್ನಡ ವಾರ್ತೆ
ಪಣಜಿ: ಪಣಜಿಯ ದಿವಜಾ ಸರ್ಕಲ್ ಬಳಿ ಸೋಮವಾರ ಮಧ್ಯರಾತ್ರಿಯ ವೇಳೆಗೆ ಐಶಾರಾಮಿ ಕಾರು ಭೀಕರ ಅಪಘಾತಕ್ಕೀಡಾಗಿದೆ. ತಮಿಳುನಾಡು ನೋಂದಣಿಯ ಈ ಐಶಾರಾಮಿ ಕಾರು ಪ್ರವಾಸಿ ಟ್ಯಾಕ್ಸಿ, ದ್ವಿಚಕ್ರವಾಹನ ಮತ್ತು ನಿಲ್ಲಿಸಿದ್ದ ಇತರ ವಾಹನಗಳಿಗೆ ಡಿಕ್ಕಿ ಹೊಡೆದಿದೆ. ಈ ಭೀಕರ ಅಪಘಾತದಲ್ಲಿ ಮಹಿಳೆ ಸೇರಿದಂತೆ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದು ಅವರನ್ನು ಗೋವಾ ವೈದ್ಯಕೀಯ ಕಾಲೇಜು ಬಾಂಬೋಲಿಂ ಆಸ್ಪತ್ರೆಗೆ ದಾಖಲಿಸಲಾಗಿದೆ.

ಈ ಘಟನೆಗೆ ಸಂಬಂಧಿಸಿದಂತೆ ಲಭ್ಯವಾದ ಮಾಹಿತಿಯ ಅನುಸಾರ- ಪಣಜಿಯ ದೀವಜಾ ಸರ್ಕಲ್ ವೃತ್ತದ ಬಳಿಯಲ್ಲಿ ಈ ಭೀಕರ ಅಪಘಾತ ಸಂಭವಿಸಿದೆ. ಡಿಕ್ಕಿಯ ಪರಿಣಾಮ ನಾಲ್ಕು ದ್ವಿಚಕ್ರ ವಾಹನಗಳು ಸಂಪೂರ್ಣ ಜಖಂ ಗೊಂಡಿದೆ. ಅಪಘಾತದ ರಭಸಕ್ಕೆ ಐಶಾರಾಮಿ ಕಾರಿನ ಒಂದು ಚಕ್ರವೇ ಕಿತ್ತುಹೋಗಿದೆ.
ಘಟನೆಯ ಕುರಿತು ಮಾಹಿತಿ ಲಭ್ಯವಾಗುತ್ತಿದ್ದಂತೆಯೇ ಪೋಲಿಸರು ಘಟನಾ ಸ್ಥಳಕ್ಕೆ ಆಗಮಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.