ಸುದ್ಧಿಕನ್ನಡ ವಾರ್ತೆ
ಪಣಜಿ: ಗೋವಾದ ದೋನಾಪಾವುಲಾದಲ್ಲಿರುವ ರಾಷ್ಟ್ರೀಯ ಸಮುದ್ರ ವಿಜ್ಞಾನ ಸಂಸ್ಥೆಯ (ಎನ್ ಐಒ) 13 ಜನ ವಿದ್ಯಾರ್ಥಿಗಳು ಬುಧವಾರ ಬೆಳಿಗ್ಗೆ ಮೀರಾಮಾರ ಬೀಚ್ ಬಳಿಯ ಅರಬ್ಬೀ ಸಮುದ್ರದಲ್ಲಿ ಮೀನುಗಾರಿಕಾ ಬೋಟ್ ನಲ್ಲಿ ತೆರಳಿದ್ದ ಸಂದರ್ಭದಲ್ಲಿ ಸಮುದ್ರದಲ್ಲಿ ಬೋಟ್ ಸಿಲುಕಿಕೊಂಡ ಘಟನೆ ನಡೆದಿದೆ. ದೃಷ್ಠಿ ಜೀವರಕ್ಷಕ ದಳದ ಸಿಬ್ಬಂಧಿಗಳು ಕಾರ್ಯಾಚರಣೆ ನಡೆಸಿ ಈ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ದಡಕ್ಕೆ ಕರೆತಂದಿದ್ದಾರೆ.

ಲಭ್ಯವಾದ ಮಾಹಿತಿಯ ಅನುಸಾರ- ಪಣಜಿ ಸಮೀಪದ ಮೀರಾಮಾರ್ ಬೀಚ್ ನಿಂದ ಸುಮಾರು 200 ಮೀಟರ್ ದೂರದ ಸಮುದ್ರದಲ್ಲಿ ಈ ಘಟನೆ ನಡೆದಿದೆ. ಬುಧವಾರ ಬೆಳಿಗ್ಗೆ ಎನ್ ಐಒ ವಿದ್ಯಾರ್ಥಿಗಳು ಸಾಗರಿ ಅಭ್ಯಾಸಕ್ಕಾಗಿ ಮೀನುಗಾರಿಕಾ ಬೋಟ್ ನಲ್ಲಿ ತೆರಳಿದ್ದರು. ಇದ್ದಕ್ಕಿದ್ದಂತೆಯೇ ಸಮುದ್ರ ಮಧ್ಯದಲ್ಲಿ ಬೋಟ್ ಸಿಲುಕಿಕೊಂಡಿತು.

ಘಟನೆಯ ಮಾಹಿತಿ ಲಭ್ಯವಾಗುತ್ತಿದ್ದಂತೆಯೇ ಜೀವರಕ್ಷಕ ದಳದ ಸಿಬ್ಬಂಧಿಗಳು ರಕ್ಷಣಾ ಕಾರ್ಯಕ್ಕೆ ಧಾವಿಸಿದರು. ಪ್ರತ್ಯೇಕ ಬೋಟ್ ಸಹಾಯದಿಂದ ಈ ಎಲ್ಲ ವಿದ್ಯಾರ್ಥಿಗಳನ್ನು ಹಂತ ಹಂತವಾಗಿ ಸುರಕ್ಷಿತವಾಗಿ ದಡಕ್ಕೆ ಕರೆತರಲಾಯಿತು. ಅದೃಷ್ಠವಶಾತ್ ಈ ಘಟನೆಯಲ್ಲಿ ಯಾವುದೇ ಜೀವಹಾನಿಯಾಗಿಲ್ಲ.