ಸುದ್ದಿ ಕನ್ನಡ ವಾರ್ತೆ
ಗೋವಾ: ಗೋವಾ-ಕರ್ನಾಟಕ ಗಡಿಯ ಸಮೀಪದ ಅನಮೋಡ ಘಾಟ್ ಪ್ರದೇಶದಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಟ್ರಕ್‌ ಕಂದಕಕ್ಕೆ ಉರುಳಿದ್ದು, ಚಾಲಕ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಮಾಹಿತಿಯ ಪ್ರಕಾರ, ಜೂನ್ 13ರ ರಾತ್ರಿ ಟ್ರಕ್ ನಿಯಂತ್ರಣ ತಪ್ಪಿ ಆಳವಾದ ಕಂದಕಕ್ಕೆ ಬಿದ್ದಿದೆ. ಅಪಘಾತದ ಬಳಿಕ ಪೊಲೀಸರು ಹಾಗೂ ರಕ್ಷಣಾ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಕಾರ್ಯಾಚರಣೆ ನಡೆಸಿದರು. ಮೃತ ಚಾಲಕನನ್ನು ಪಶ್ಚಿಮ ಬಂಗಾಳದ ನಿವಾಸಿ ಸುದೀಪ್ ಕಪೋಜ್ ಎಂದು ಗುರುತಿಸಲಾಗಿದೆ.

ಘಟನೆಯ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ. ಕೊಲ್ಲೆಂ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಅಪಘಾತದ ಕುರಿತು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.