ಸುದ್ದಿ ಕನ್ನಡ ವಾರ್ತೆ
ಗೋವಾದಲ್ಲಿ ಕಾಂಗ್ರೆಸ್ ಪಕ್ಷ ನಡೆಸುತ್ತಿರುವ ಗೋವಾ ರಾಕಂಡ ಯಾತ್ರೆ ಎಲ್ಲಿ ಪಾಲ್ಗೊಂಡಿದ್ದ ಎ ಐ ಸಿ ಸಿ ಕಾರ್ಯದರ್ಶಿಸಿ ಡಾಕ್ಟರ್ ಅಂಜಲಿ ನಿಂಬಾಳ್ಕರ್ ರವರ ಕಾಲಿಗೆ ಪೆಟ್ಟಾಗಿದ್ದು ಸದ್ಯ ಬೆಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಕಳೆದ ಕೆಲ ದಿನಗಳಿಂದ ಗೋವಾದಲ್ಲಿ ಕಾಂಗ್ರೆಸ್ ಪಕ್ಷ ಹಮ್ಮಿಕೊಂಡಿರುವ ಗೋವಾ ರಾಖಂಡ್ ಯಾತ್ರೆಯಲ್ಲಿ ಡಾ. ಅಂಜಲಿ ನಿಂಬಾಳ್ಕರ್ ರವರು ಪಾಲ್ಗೊಂಡಿದ್ದರು. ಕಳೆದ ಎರಡು ದಿನಗಳ ಹಿಂದೆ ಗೋವಾದ ಪೋಂಡಾದಲ್ಲಿ ಈ ಯಾತ್ರೆ ನಡೆಯುತ್ತಿದ್ದ ಸಂದರ್ಭದಲ್ಲಿ ಅಂಜಲಿ ನಿಂಬಾಳ್ಕರ್ ರವರ ಕಾಲಿಗೆ ಪೆಟ್ಟಾಗಿದೆ ಎನ್ನಲಾಗಿದೆ.
ಗೋವಾದಲ್ಲಿ ಪ್ರಾಥಮಿಕ ಚಿಕಿತ್ಸೆ ನಂತರ ಅವರು ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯ ಅವರ ಆರೋಗ್ಯ ಸ್ಥಿರವಾಗಿದ್ದು ಚೇತರಿಸಿಕೊಳ್ಳುತ್ತಿದ್ದಾರೆ ಎನ್ನಲಾಗಿದೆ.
