ಸುದ್ಧಿಕನ್ನಡ ವಾರ್ತೆ
ಪಣಜಿ: ಗೋವಾದ ಮಾಜಿ ರಾಜ್ಯಪಾಲ ಸತ್ಯಪಾಲ್ ಮಲಿಕ್ ರವರು ನಿಧನರಾಗಿದ್ದಾರೆ. ಅವರಿಗೆ 79 ವರ್ಷ ವಯಸ್ಸಾಗಿತ್ತು. ದೆಹಲಿಯ ರಾಮ ಮನೋಹರ ಲೋಹೊಯಾ ಆಸ್ಪತ್ರೆಯಲ್ಲಿ ಅವರು ಚಿಕಿತ್ಸೆ ಪಡೆಯುತ್ತಿದ್ದ ಸಂದರ್ಭದಲ್ಲಿ ಕೊನೆಯುಸಿರೆಳೆದಿದ್ದಾರೆ. ಅವರು ಗೋವಾ, ಮೇಘಾಲಯ, ಜಮ್ಮುಕಾಶ್ಮೀರದ ರಾಜ್ಯಪಾಲರಾಗಿ ಸೇವೆ ಸಲ್ಲಿಸಿದ್ದರು.

ಸಂಸದರಾಗಿ ನಂತರ ರಾಜ್ಯಪಾಲರಾದ ಸತ್ಯಪಾಲ್ ಮಲಿಕ್ ರವರು ಕಳೆದ ಅನೇಕ ವರ್ಷಗಳಿಂದ ಬಿಜೆಪಿಯೊಂದಿಗೆ ಸಂಪರ್ಕದಲ್ಲಿದ್ದರು. ಹಲವು ರಾಜ್ಯಗಳಲ್ಲಿ ರಾಜ್ಯಪಾಲರಾಗಿ ಸೇವೆ ಸಲ್ಲಿಸಿದ್ದರು. ಆದರೆ ಕಳೆದ ಅನೇಕ ವರ್ಷಗಳಿಂದ ಸರ್ಕಾರದ ವಿರುದ್ಧ ಧ್ವನಿಯೆತ್ತುತ್ತಿದ್ದರು.

ದೀರ್ಘಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ ಸತ್ಯಪಾಲ್ ಮಲಿಕ್ ರವರು ಕೊನೆಯುಸಿರೆಳೆದಿದ್ದಾರೆ. ಅವರಿಗೆ ಮೂತ್ರಪಿಂಡದ ಸಮಸ್ಯೆಯಿತ್ತು ಎನ್ನಲಾಗಿದೆ. ಕೃಇ ಚಳುವಳಿ,ಭೃಷ್ಠಾಚಾರ, ಮತ್ತು ಅನೇಕ ರಾಷ್ಟ್ರೀಯ ಸಮಸ್ಯೆಗಳ ಬಗ್ಗೆ ಅವರು ತಮ್ಮ ಅಭಿಪ್ರಾಯವನ್ನು ಬಹಿರಂಗವಾಗಿಯೇ ವ್ಯಕ್ತಪಡಿಸುತ್ತಿದ್ದುದರಿಂದ ಅವರು ಹೆಚ್ಚು ಸುದ್ಧಿಯಾಗಿದ್ದರು.