Banner Ad

ಸುದ್ದಿ ಕನ್ನಡ ವಾರ್ತೆ
ಪಣಜಿ: ಪುಟ್ ಪಾತ್ ಮೇಲೆ ಮಲಗಿದ್ದ ಕಾರ್ಮಿಕ ನೋರ್ವನ ಮೇಲೆ ಕಾರು ಹರಿದು ಸಾವನ್ನಪ್ಪಿದ ಘಟನೆ, ಗೋವಾ ರಾಜಧಾನಿ ಪಣಜಿಯಲ್ಲಿ ಬುಧವಾರ ಮಧ್ಯಾಹ್ನ ನಡೆದಿದೆ. ಈ ಘಟನೆಯಿಂದಾಗಿ ಕೆಲಕಾಲ ಈ ಭಾಗದಲ್ಲಿ ಆತಂಕದ ವಾತಾವರಣ ಸೃಷ್ಟಿಯಾಗಿತ್ತು.

ಬುಧವಾರ ಮಧ್ಯಾನ 3:00 ಸುಮಾರಿಗೆ ಈ ಘಟನೆ ನಡೆದಿದೆ. ಪಣಜಿ ಮಾರುಕಟ್ಟೆಯ ಬಳಿ ರಸ್ತೆ ಬದಿಯಲ್ಲಿರುವ ಫುಟ್ಪಾತ್ ನಲ್ಲಿ ಕಾರ್ಮಿಕ ಮಲಗಿದ್ದ. ವೇಗವಾಗಿ ಬಂದ ಕಾರು ಚಾಲಕನ ನಿಯಂತ್ರಣ ತಪ್ಪಿ ಫುಟ್ಪಾತ್ ಮೇಲೆ ಮಲಗಿದ್ದ ಕಾರ್ಮಿಕನ ಮೇಲೆ ಹಾಯ್ದು ಕಾರ್ಮಿಕ ಸಾವನ್ನಪ್ಪಿದ್ದಾನೆ.

Banner Ad

ಗಂಭೀರವಾಗಿ ಗಾಯಗೊಂಡಿದ್ದ ಕಾರ್ಮಿಕರನ್ನು ಕೂಡಲೇ ಆಸ್ಪತ್ರೆಗೆ ಕರೆದೊಯ್ದಾಗ ವೈದ್ಯರು ಈತನು ಸಾವನ್ನಪ್ಪಿರುವುದಾಗಿ ಘೋಷಿಸಿದರು. ಅಜಾ ಗುರುಕತೆಯಿಂದ ಕಾರು ಚಲಾಯಿಸಿದ್ದ ಮನಜಿತ್ ಸಿಂಗ್ ಎಂಬ ಕಾರು ಚಾಲಕನನ್ನು ಪೊಲೀಸರು ಬಂಧಿಸಿದ್ದಾರೆ.

Banner Ad