Banner Ad

ಸುದ್ಧಿಕನ್ನಡ ವಾರ್ತೆ
ಪಣಜಿ: ಗೋವಾದ ವೆರ್ಣಾ ಇಂಡಸ್ಟ್ರಿಯಲ್ ಎಸ್ಟೇಟ್ ನಲ್ಲಿರುವ ಗೋವಾ ಸ್ಟೀಲ್ ಮತ್ತು ಪೈಪ್ ಕಂಪನಿಯಲ್ಲಿ ಸೋಮವಾರ ಭಾರಿ ಬೆಂಕಿ ಕಾಣಸಿಕೊಂಡಿದ್ದು, ಅಗ್ನಿ ಅವಗಢದಿಂದ ಹೆಚ್ಚಿನ ಹಾನಿ ಸಂಭವಿಸಿದೆ. ಕಂಪನಿಯಲ್ಲಿ ವೆಲ್ಡಿಂಗ್ ಕೆಲಸ ನಡೆಯುತ್ತಿದ್ದಾಗ ಈ ಅವಗಢ ಸಂಭವಿಸಿದೆ ಎಂದು ವರದಿಯಾಗಿದೆ. ಬೆಂಕಿಯು ಕಂಪನಿಯ ಪ್ರದೇಶದಲ್ಲಿ ಕೋಲಾಹಲ ಸೃಷ್ಠಿಸಿದೆ.

ಕಂಪನಿಯಲ್ಲಿ ಸೋಮವಾರ ಬೆಳಗ್ಗೆ ವೆಲ್ಡಿಂಗ್ ಕೆಲಸದ ಸಮಯದಲ್ಲಿ ಕಿಡಿಯಿಂದ ಬೆಂಕಿ ಹೊತ್ತಿಕೊಂಡಿರಬಹುದು ಎಂದು ಅಂದಾಜಿಸಲಾಗಿದೆ. ಬೆಂಕಿಯು ನಂತರ ಎಲ್ಲೆಡೆ ಆವರಿಸಿತು. ಭಾರಿ ದಟ್ಟ ಹೊಗೆ ಇಂಡಸ್ಟ್ರಿಯಲ್ ಎಸ್ಟೇಟ್ ನಲ್ಲಿ ಕೋಲಾಹಲ ಸೃಷ್ಠಿಸಿದೆ. ಈ ಅಗ್ನಿ ಅವಗಡದ ಕುರಿತಂತೆ ಅಗ್ನಿಶಾಮಕ ದಳಕ್ಕೆ ಮಾಹಿತಿ ಬಂದ ಕೂಡಲೇ ಘಟನಾ ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸುವ ಕಾರ್ಯ ಕೈಗೊಂಡರು.

Banner Ad

ಈ ಭಾರಿ ಅಗ್ನಿ ಅವಗಢದಿಂದ ಇಂಡಸ್ಟ್ರಿಯಲ್ ಎಸ್ಟೇಟ್ ನಲ್ಲಿ ಸುರಕ್ಷತೆಯ ಪ್ರಶ್ನೆ ಮತ್ತೆ ಮುನ್ನೆಲೆಗೆ ಬಂದಿದೆ. ತನಿಖೆಯ ನಂತರ ಈ ಅಗ್ನಿ ಅವಗಢಕ್ಕೆ ನಿಖರವಾದ ಕಾರಣ ತಿಳಿದುಬರಬೇಕಿದೆ.

Banner Ad