ಸುದ್ಧಿಕನ್ನಡ ವಾರ್ತೆ
ಪಣಜಿ: ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತಿಯಿಂದಾಗಿ ಮತ್ತು ವಿವಿಧ ಹವಾಮಾನ ಬದಲಾವಣೆಯಿಂದಾಗಿ ಶುಕ್ರವಾರ ಗೋವಾ ರಾಜ್ಯದಲ್ಲಿ ಗುಡುಗು ಸಹಿತ ಮಳೆಯಾಗಿದೆ. ಮಧ್ಯಾಹ್ನದ ವೇಳೆಗೆ ಬಾರಿ ಗಾಳಿಯೊಂದಿಗೆ ಗುಡುಗು ಸಹಿತ ಮಳೆ ಸುರಿದಿದೆ.
ಶುಕ್ರವಾರ ಬೆಳಗ್ಗೆಯಿಂದಲೇ ಮೋಡಕವಿದ ವಾತಾವರಣ ಮುಂದುವರಿದಿತ್ತು. ನಂತರ ಮಧ್ಯಾಹ್ನ 3:30ರ ಸುಮಾರು ಗುಡುಗು ಸಹಿತ ಮಳೆ ಆರಂಭಗೊಂಡಿತು. ದಿಡೀರ್ ಸುರಿದ ಮಳೆಗೆ ಪಣಜಿಯ ಪಾಟೋ , ಸೇರಿದಂತೆ ಕೆಲವು ಪ್ರದೇಶದ ರಸ್ತೆಗಳು ಜಲಾವೃತಗೊಂಡವು. ನಂತರ ಕೆಲ ಸಮಯದವರೆಗೆ ತುಂತುರು ಮಳೆ ಮುಂದುವರಿದಿತ್ತು.
ಕಳೆದ 24 ಗಂಟೆಗಳಲ್ಲಿ ಗೋವಾ ರಾಜಧಾನಿ ಪಣಜಿಯಲ್ಲಿ ಗರಿಷ್ಠ 36 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದ್ದು, ಅಕ್ಟೋಬರ್ 29 ರವರೆಗೆ ರಾಜ್ಯದಲ್ಲಿ ಗರಿಷ್ಠ ತಾಪಮಾನ 33 ರಿಂದ 35 ಡಿಗ್ರಿ ಸೆಲ್ಸಿಯಸ್ ವರೆಗೆ ಇರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಅಕ್ಟೋಬರ್ 26 ರಿಂದ 29 ರವರೆಗೆ ರಾಜ್ಯದಲ್ಲಿ ಮತ್ತೆ ಒಣ ಹವಾಮಾನ ಮುಂದುವರಿಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
