ಸುದ್ಧಿಕನ್ನಡ ವಾರ್ತೆ
ಮುಂಬಯಿ-ಗೋವಾ ರಾಷ್ಟ್ರೀಯ ಹೆದ್ದಾರಿಯಲ್ಲಿ ಗಣೇಶ ಚತುರ್ಥಿಯ ಸಂದರ್ಭದಲ್ಲಿ ಉಂಟಾಗಬುದಾದ ವಾಹನ ದಟ್ಟಣೆಯನ್ನು ಗಮನದಲ್ಲಿಟ್ಟುಕೊಂಡು ಸರ್ಕಾರವು ಈ ಮಾರ್ಗದಲ್ಲಿ ಗಣೇಶ ಚತುರ್ಥಿಯ ಸಂದರ್ಭಸದಲ್ಲಿ ಭಾರಿ ವಾಹನಗಳ ಓಡಾಟಕ್ಕೆ ನಿರ್ಬಂಧ ಹೇರಿದೆ. ಇದರಿಂದಾಗಿ ಗಣೇಶ ಚತುರ್ಥಿಯ ಸಂದರ್ಭದಲ್ಲಿ ಹಬ್ಬದ ನಿಮಿತ್ತ ಓಡಾಟ ನಡೆಸುವವರು ಸರಾಗವಾಗಿ ಓಡಾಟ ನಡೆಸಬಹುದಾಗಿದೆ.

ಗಣೇಶ ಚತುರ್ಥಿಯ ಸಂದರ್ಭದಲ್ಲಿ ಅಗಷ್ಟ 23 ರಿಂದ ಅಗಷ್ಟ 26 ರವರೆಗೆ ಮುಂಬಯಿ-ಗೋವಾ ರಾಷ್ಟ್ರೀಯ ಹೆದ್ಧಾರಿಯಲ್ಲಿ ಭಾರಿ ವಾಹನ ದಟ್ಟಣೆಯುಂಟಾಗುವ ಸಾಧ್ಯತೆಯಿರುತ್ತದೆ. ಇದರಿಂದಾಗಿ ವಾಹನ ದಟ್ಟಣೆ ಕಡಿಮೆ ಮಾಡಲು ಭಾರಿ ವಾಹನಗಳ ಓಡಾಟಕ್ಕೆ ನಿರ್ಬಂಧ ಹೇರಲಾಗಿದೆ. ಆದರೆ ತುರ್ತು ಸೇವೆಗಳಾದ ಅಂಬುಲೆನ್ಸ, ರೇಷನ್ ಸಾಮಗ್ರಿಗಳ ವಾಹನ, ಸೇರಿದಂತೆ ಅತ್ಯಾವಶ್ಯಕ ಸೇವೆಗಳ ವಾಹನಗಳ ಓಡಾಟಕ್ಕೆ ಈ ನಿರ್ಬಂಧದಿಂದ ವಿನಾಯತಿ ನೀಡಲಾಗಿದೆ.

ಮುಂಬಯಿ ಗೋವಾ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾರಿ ವಾಹನಗಳ ಓಡಾಟಕ್ಕೆ ನಿರ್ಬಂಧವಿದ್ದರೂ ಕೂಡ ಈ ಭಾರಿ ವಾಹನಗಳ ಓಡಾಟಕ್ಕೆ ಪರ್ಯಾಯ ಮಾರ್ಗದ ವ್ಯವಸ್ಥೆ ಮಾಡಲಾಗಿದೆ. ಈ ವಾಹನಗಳು ಪುಣೆ-ಸಾತಾರಾ-ಕರಾಡ-ಕೊಲ್ಲಾಪುರ ಮಾರ್ಗವಾಗಿ ಗೋವಾಕ್ಕೆ ಆಗಮಿಸಬಹುದಾಗಿದೆ. ಪಶ್ರಚಿಮ ಮಹಾರಾಷ್ಟ್ರ ಹಾಗೂ ಕೊಂಕಣ ಭಾಗವನದನು ಜೋಡಿಸುವ ಘಾಟ್ ರಸ್ತೆಯ ಮೂಲಕ ಈ ವಾಹನಗಳ ಓಡಾಟಕ್ಕೆ ಪರವಾನಗಿ ನೀಡಲಾಗಿದೆ.

ಗಣೇಶ ಚತುರ್ಥಿಯ ಸಂದರ್ಭದಲ್ಲಿ ಗೋವಾ ಮುಂಬಯಿ ಮಾರ್ಗದಲ್ಲಿ ವಾಹನ ಸಂಚಾರದಲ್ಲಿ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಲು ಈ ಮಾರ್ಗದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಟ್ರಾಫಿಕ್ ಪೋಲಿಸರನ್ನು ನಿಯೋಜಿಸಲಾಗುತ್ತಿದೆ ಎಂಬ ಮಾಹಿತಿ ಲಭ್ಯವಾಗಿದೆ.