ಸುದ್ದಿ ಕನ್ನಡ ವಾರ್ತೆ
ಪಣಜಿ: ಹೊರನಾಡು ಕನ್ನಡ ಮಾಧ್ಯ ವಿದ್ಯಾರ್ಥಿಗಳಿಗೆ ನೀಡಲಾಗುತ್ತಿರುವ ಕನ್ನಡ ಮಾಧ್ಯಮ ಪ್ರಶಸ್ತಿ ಯೋಜನೆಯನ್ನು ಮುಂದುವರಿಸುವ ಕುರಿತು ಬೆಂಗಳೂರು ವಿಧಾನಸೌಧದಲ್ಲಿ ಕನ್ನಡ ಅಭಿವೃದ್ಧಿ ಪ್ರಾಧಿಕಾರದಿಂದ ಸೋಮವಾರ ಮಹತ್ವದ ಸಭೆಯನ್ನು ಆಯೋಜಿಸಲಾಗಿತ್ತು.
ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಡಾ. ಪುರುಷೋತ್ತಮ್ ಬಿಳಿಮಲೆ ರವರ ಅಧ್ಯಕ್ಷತೆಯಲ್ಲಿ ಸೋಮವಾರ ಮಧ್ಯಾಹ್ನ 3 ಗಂಟೆಗೆ ವಿಧಾನಸೌಧದ ಎರಡನೇ ಮಹಡಿ ಕೊಠಡಿ ಸಂಖ್ಯೆ 26ರಲ್ಲಿ ಸಭೆ ನಡೆಯಿತು. ಈ ಸಭೆಯಲ್ಲಿ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಡಾ. ಸಂತೋಷ್ ಹಾನಗಲ್ ರವರು ಉಪಸ್ಥಿತರಿದ್ದರು.
ಈ ಸಭೆಯಲ್ಲಿ ಗೋವಾ, ಕೇರಳ, ಆಂಧ್ರಪ್ರದೇಶ, ಮಹಾರಾಷ್ಟ್ರ, ತೆಲಂಗಾಣ, ರಾಜ್ಯದ ಕನ್ನಡ ಸಂಘಟನೆಗಳ ಅಧ್ಯಕ್ಷರು ಹಾಗೂ ಪ್ರತಿನಿಧಿಗಳು ಪಾಲ್ಗೊಂಡಿದ್ದರು. ಗೋವಾ ರಾಜ್ಯದಿಂದ ಕಸಾಪ ಗೋವಾ ರಾಜ್ಯದ್ಯಕ್ಷ ಡಾ. ಸಿದ್ದಣ್ಣ ಮೇಟಿ, ಗೋವಾ ಕನ್ನಡ ಸಮಾಜದ ಅಧ್ಯಕ್ಷ ಅರುಣ್ ಕುಮಾರ್ , ಮತ್ತಿತರರು ಉಪಸ್ಥಿತರಿದ್ದರು.
