ಸುದ್ದಿ ಕನ್ನಡ
ಗೋವಾ: ತುಳು ಕೂಟ (ರಿ.) ಗೋವಾ ಹಾಗೂ ತುಳುವ ಮಹಾಸಭಾ ಇವುಗಳ ಜಂಟಿ ಆಶ್ರಯದಲ್ಲಿ ‘ವಾರ್ಷಿಕ ಉತ್ಸವ – 2026’ ಕಾರ್ಯಕ್ರಮವು ನವೆಂಬರ್ 29, 2026 ರಂದು ಭಾನುವಾರ ಗೋವಾದ ಪೋರ್ವೋರಿಮ್ನಲ್ಲಿರುವ ಪುಂಡಲೀಕ ದೇವಸ್ಥಾನದ ಸಭಾಗೃಹದಲ್ಲಿ ನಡೆಯಲಿದೆ.
ಅಖಿಲ ಭಾರತ ತುಳು ಒಕ್ಕೂಟದ ಗೌರವಾಧ್ಯಕ್ಷರಾದ ಶ್ರೀ ಶಶಿಧರ ಶೆಟ್ಟಿ ಬರೋಡಾ ಅವರು ಸಮಾರಂಭವನ್ನು ಉದ್ಘಾಟಿಸಲಿದ್ದು, ಗೋವಾ ತುಳು ಕೂಟದ ಅಧ್ಯಕ್ಷರಾದ ಶ್ರೀ ಗಣೇಶ್ ಶೆಟ್ಟಿ ಇರ್ವತ್ತೂರು ಅಧ್ಯಕ್ಷತೆ ವಹಿಸಲಿದ್ದಾರೆ.
ಮೂಡುಬಿದಿರೆ ಶಾಸಕರಾದ ಶ್ರೀ ಉಮಾನಾಥ್ ಕೋಟ್ಯಾನ್, ಬೆಳ್ತಂಗಡಿ ಶಾಸಕರಾದ ಶ್ರೀ ಹರೀಶ್ ಪೂಂಜ, ಮುಂಬೈ ಉದ್ಯಮಿ ಶ್ರೀ ಮಹೇಶ್ ಶೆಟ್ಟಿ ತೆಳ್ಳಾರು, ತುಳುವ ಮಹಾಸಭಾ ವರ್ಲ್ಡ್ ಅಧ್ಯಕ್ಷ ಶ್ರೀ ಸರ್ವೋತ್ತಮ ಶೆಟ್ಟಿ ಅಬುಧಾಬಿ ಹಾಗೂ ಕರ್ನಾಟಕ ರಾಜ್ಯ ಅಧ್ಯಕ್ಷ ಶ್ರೀ ದೇವೇಂದ್ರ ಹೆಗ್ಡೆ ಕೊಕ್ಕಡ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.
ತುಳುವ ಮಹಾಸಭಾದ ಸಂಚಾಲಕ ಡಾ. ರಾಜೇಶ್ ಕೃಷ್ಣ ಆಳ್ವ ಅಭಿನಂದನಾ ಭಾಷಣ ಮಾಡಲಿದ್ದಾರೆ.
ತುಳು ಚಲನಚಿತ್ರ ನಟರಾದ ಶ್ರೀ ಪ್ರಸನ್ನ ಶೆಟ್ಟಿ ಬೈಲೂರು ಮತ್ತು ಶ್ರೀ ಸಂದೀಪ್ ಶೆಟ್ಟಿ ಮಾಣಿಬೆಟ್ಟು, ಗೋವಾ ಬಂಟರ ಸಂಘದ ಅಧ್ಯಕ್ಷ ಶ್ರೀ ಶಶಿಧರ ರೈ, ಬಿಲ್ಲವರ ಸಂಘದ ಅಧ್ಯಕ್ಷ ಶ್ರೀ ಕೃಷ್ಣ ಪೂಜಾರಿ, ನಾರಾಯಣ ಗುರು ಟ್ರಸ್ಟ್ (ರಿ.) ಗೋವಾ ಅಧ್ಯಕ್ಷ ಶ್ರೀ ಪ್ರಕಾಶ್ ಪೂಜಾರಿ ಹಾಗೂ ತುಳು ಕೂಟ ಗೋವಾದ ಗೌರವಾಧ್ಯಕ್ಷರಾದ ಶ್ರೀ ಸದಾನಂದ ಶೆಟ್ಟಿ ಬೆಳುವಾಯಿ, ಶ್ರೀ ಚಂದ್ರಹಾಸ ಅಮೀನ್ ಮತ್ತು ಶ್ರೀ ವಿಜಯೇಂದ್ರ ಶೆಟ್ಟಿ ಕಟಪಾಡಿ ಉಪಸ್ಥಿತರಿರಲಿದ್ದಾರೆ. ಶ್ರೀ ನಿತೇಶ್ ಶೆಟ್ಟಿ ಎಕ್ಕಾರ್ ಕಾರ್ಯಕ್ರಮ ನಿರೂಪಿಸಲಿದ್ದಾರೆ.
ಸಾಂಸ್ಕೃತಿಕ ಕಾರ್ಯಕ್ರಮಗಳು: ಮಧ್ಯಾಹ್ನ 2:30 ರಿಂದ ರಾತ್ರಿ 9:00 ಗಂಟೆಯವರೆಗೆ ಹಾಸ್ಯ, ಗಾಯನ, ನೃತ್ಯ ಹಾಗೂ ನಾಟಕ ಪ್ರದರ್ಶನಗಳು ನಡೆಯಲಿವೆ. ಮಧ್ಯಾಹ್ನ 3:00 ಗಂಟೆಗೆ ಪ್ರಶಂಸಾ ತಂಡದವರಿಂದ ‘ಕಾಮಿಡಿ ಶಾಟ್ಸ್’ (Comedy Shots) ತುಳು ಕಾಮಿಡಿ ಶೋ ಹಾಗೂ ಸಂಜೆ 6:00 ಗಂಟೆಗೆ ಚೈತನ್ಯ ಕಲಾವಿದರು ಬೈಲೂರು ಇವರಿಂದ ‘ಊರು ಬೋಡಾ ಪುದರ್ ಬೋಡಾ’ ತುಳು ನಾಟಕ ಪ್ರದರ್ಶನಗೊಳ್ಳಲಿದೆ.
ಸಮಸ್ತ ತುಳು ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ತುಳು ಕೂಟ ಗೋವಾದ ಕಾರ್ಯದರ್ಶಿ ಶ್ರೀ ಶಶಿಧರ ನಾಯಕ್ ಬೋಂದೆಲ್, ಕೋಶಾಧಿಕಾರಿ ಶ್ರೀ ಪ್ರಶಾಂತ್ ಜೈನ್, ಸಂಚಾಲಕ ಶ್ರೀ ಅಶೋಕ್ ಶೆಟ್ಟಿ ಹಾಗೂ ಪದಾಧಿಕಾರಿಗಳು ಪ್ರಕಟಣೆಯಲ್ಲಿ ಕೋರಿದ್ದಾರೆ.
