ಸುದ್ಧಿಕನ್ನಡ ವಾರ್ತೆ
Goa: ಹರಿಯಾಣದಲ್ಲಿ BJP ಮೂರನೇಯ ಬಾರಿಗೆ ಸರ್ಕಾರ ರಚಿಸಲಿರುವ ಈ ಗೆಲುವಿನ ಬಗ್ಗೆ ಗೋವಾ ಮುಖ್ಯಮಂತ್ರಿ ಪ್ರಮೋದ ಸಾವಂತ್ ಸಂತಸ ವ್ಯಕ್ತಪಡಿಸಿದ್ದು, ಇದು ಉತ್ತಮ ಆಡಳಿತ, ಜನಕಲ್ಯಾಣ ಕಾರ್ಯಕ್ರಮ ಹಮ್ಮಿಕೊಂಡಿದ್ದಕ್ಕೆ ಸಿಕ್ಕ ಜಯ ಎಂದು ಬಣ್ಣಿಸಿದ್ದಾರೆ.
ಪಣಜಿಯಲ್ಲಿ ಸುದ್ಧಿಗೋಷ್ಠಿಯಲ್ಲಿ ನಮಾತನಾಡಿದ ಗೋವಾ ಮುಖ್ಯಮಂತ್ರಿ ಸಾವಂತ್- ಇದು ಎಲ್ಲರ ಸಹಕಾರ, ಅಂತ್ಯೋದಯ ತತ್ವದೊಂದಿಗೆ ಎಲ್ಲರ ಅಭಿವೃದ್ಧಿಗೆ ಸಂದ ಜಯ. ಈ ಯಶಸ್ಸಿಗೆ ಎಲ್ಲಾ ಕಾರ್ಯಕರ್ತರಿಗೆ ಅಭಿನಂದನೆ ಸಲ್ಲಿಸುತ್ತೇನೆ. ಕಾರ್ಯಕರ್ತರೇ ಪಕ್ಷದ ಬೆನ್ನೆಲುಬು. ಪ್ರಧಾನಿ ನರೇಂದ್ರ ಮೋದಿ, ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿನಡ್ಡಾ, ಕೇಂದ್ರ ಗೃಹ ಸಚಿವ ಅಮಿತ್ ಶಾ, ಹರಿಯಾಣ ಮುಖ್ಯಮಂತ್ರಿ ನಾಯಬ್ ಸೈನಿ, ಬಿಜೆಪಿ ರಾಜ್ಯಾಧ್ಯಕ್ಷ ಮೋಹನ್ ಲಶಲ್ ಬಡಫಲಿ ರವರಿಗೆ ಈ ಗೆಲುವಿನ ಶ್ರೇಯ ಸಲ್ಲುತ್ತದೆ ಎಂದು ಗೋವಾ ಮುಖ್ಯಮಂತ್ರಿ ಪ್ರಮೋದ ಸಾವಂತ್ ಅಭಿಪ್ರಾಯಪಟ್ಟರು.
ಈ ಸಂದರ್ಭದಲ್ಲಿ ಉಪಸ್ಥಿತರಿದ್ದ ಗೋವಾ ಬಿಜೆಪಿ ರಾಜ್ಯಾಧ್ಯಕ್ಷ ಸದಾನಂತ ತನಾವಡೆ- ಇದು ಪ್ರಧಾನಿ ನರೇಂದ್ರ ಮೋದಿ ರವರ ಕಾರ್ಯಕ್ಕೆ ಸಂದ ಮನ್ನಣೆ ಎಂದು ಬಣ್ಣಿಸಿದರು.