ಸುದ್ದಿ ಕನ್ನಡ ವಾರ್ತೆ
ಚಿಕ್ಕಮಗಳೂರು: ಸಿಎಂ ಆದ ಬಳಿಕ ಮೊದಲ ಬಾರಿಗೆ ಕಾಫಿ ನಾಡು ಚಿಕ್ಕಮಗಳೂರು ಜಿಲ್ಲೆಗೆ ಆಗಮಿಸಿದ ಸಿಎಂ ಡಿ.ಕೆ. ಶಿವಕುಮಾರ್ ಅವರು ಎನ್.ಆರ್.ಪುರ ತಾಲೂಕಿನ ಶ್ರೀ ರಂಭಾಪುರಿ ಮಠಕ್ಕೆ ತೆರಳಿ ರಂಭಾಪುರಿ ಶ್ರೀಗಳ ಆಶೀರ್ವಾದ ಪಡೆದರು.
ತೀರ್ಥಹಳ್ಳಿಯಲ್ಲಿ ನಡೆದ ಕಾರ್ಯಕ್ರಮದ ಬಳಿಕ ಹೆಲಿಕಾಪ್ಟರ್ ಮೂಲಕ ಶ್ರೀ ರಂಭಾಪುರಿ ಪೀಠದ ಹೆಲಿಪ್ಯಾಡ್ ಗೆ ಆಗಮಿಸಿದ ಸಿಎಂ ಶ್ರೀಗಳ ಬಳಿ ತೆರಳಿ ಆಶೀರ್ವಾದ ಪಡೆದರು. ಬಳಿಕ ಕೆಲ ನಿಮಿಷಗಳ ಶ್ರೀಗಳ ಬಳಿ ಮಾತುಕತೆ ನಡೆಸಿದರು.
ಇದಾದ ನಂತರ ಶ್ರೀ ಮಠದ ಜೀರ್ಣೋದ್ಧಾರ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಿದರು. ಈ ಸಂದರ್ಭದಲ್ಲಿ ರಂಭಾಪುರಿ ಶ್ರೀಗಳು, ಶಾಸಕರಾದ ಎಚ್.ಡಿ.ತಮ್ಮಯ್ಯ, ಟಿ.ಡಿ.ರಾಜೇಗೌಡ, ಜಿ.ಎಚ್.ಶ್ರೀನಿವಾಸ್, ನಯನಾ ಮೋಟಮ್ಮ, ಕೆ.ಎಸ್.ಆನಂದ್, ವಿಧಾನ ಪರಿಷತ್ ಸದಸ್ಯರಾದ ಗಾಯತ್ರಿ ಶಾಂತೇಗೌಡ, ಆರತಿ ಕೃಷ್ಣ ಮತ್ತಿತರರಿದ್ದರು.
