ಸುದ್ದಿ ಕನ್ನಡ ವಾರ್ತೆ

ನವದೆಹಲಿ: ದೆಹಲಿಯ ರೈಲ್ವೆ ನಿಲ್ದಾಣದಲ್ಲಿ ಕಾಲ್ತುಳಿತ ಉಂಟಾಗಿ 18 ಜನ ಪ್ರಯಾಣಿಕರು ಸಾವನ್ನಪ್ಪಿದ ಘಟನೆ ನಡೆದಿದೆ.

ಉತ್ತರ ಪ್ರದೇಶದಲ್ಲಿ ನಡೆಯುತ್ತಿರುವ ಮಹಾ ಕುಂಭಮೇಳಕ್ಕೆ ತೆರಳಲು ಹೆಚ್ಚಿನ ಸಂಖ್ಯೆಯಲ್ಲಿ ಪ್ರಯಾಣಿಕರು ರೈಲ್ವೆ ನಿಲ್ದಾಣದಲ್ಲಿ ಜಮಾಯಿಸಿದ್ದರು. ಈ ಸಂದರ್ಭದಲ್ಲಿ ಕಾಲ್ತುಳಿತ ಉಂಟಾಗಿದ್ದು 18 ಜನ ಪ್ರಯಾಣಿಕರು ಸಾವನ್ನಪ್ಪಿದ್ದು ಹಲವರು ಗಾಯಗೊಂಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.