ಸುದ್ದಿ ಕನ್ನಡ ವಾರ್ತೆ

ಬೆಳಗಾವಿ,: ನಾಡಿನ ಹೆಮ್ಮೆಯ ಕನ್ನಡದ ಶಕ್ತಿ ಕೇಂದ್ರ, ಕರ್ನಾಟಕ ವಿದ್ಯಾವರ್ಧಕ ಸಂಘವು ಮುದ್ರಿಸಿದ ೨೦೨೫ ರ ಕನ್ನಡ ಅಂಕಿಗಳುಳ್ಳ ದಿನದರ್ಶಿಕೆಯನ್ನು ಬೆಳಗಾವಿ ಜಿಲ್ಲೆಯ ಬೈಲಹೊಂಗಲ ಪುರಸಭೆಯ ಮುಖ್ಯಾಧಿಕಾರಿಗಳಾದ ಶ್ರೀ ವೀರಪ್ಪ ಚಂದ್ರಪ್ಪ ಹಸಬಿ ಅವರಿಗೆ ಕರ್ನಾಟಕ ವಿದ್ಯಾವರ್ಧಕ ಸಂಘದ ಆಜೀವ ಸದಸ್ಯರು, ಬೈಲಹೊಂಗಲ ಶ್ರೀ ಮಹಾಲಕ್ಷ್ಮಿ ಪಟ್ಟಣ ಸಹಕಾರಿ ಬ್ಯಾಂಕಿನ ನಿರ್ದೇಶಕರಾದ ಶ್ರೀ ಅನ್ವರಹುಸೇನ ಖಾದಿರಸಾಹೇಬ ಪಾಟೀಲ ರವರು ಅರ್ಪಿಸಿದ ಸಂದರ್ಭ.

ಕನ್ನಡ ಸಾಹಿತ್ಯ ಪರಿಷತ್ತಿನ ಬೆಳಗಾವಿ ಜಿಲ್ಲೆಯ ಮಾಜಿ ಅಧ್ಯಕ್ಷರಾದ ಶ್ರೀ ಮೋಹನ ಬಸನಗೌಡ ಪಾಟೀಲ, ಬೈಲಹೊಂಗಲ ಸರಕಾರಿ ಪದವಿ ಪೂರ್ವ ಮಹಾವಿದ್ಯಾಲಯದ ರಾಜ್ಯಶಾಸ್ತ್ರ ಉಪನ್ಯಾಸಕರಾದ ಶ್ರೀ ಬಸವರಾಜ ಫಕೀರಪ್ಪ ಕುರಿ, ಬೈಲಹೊಂಗಲ ತಾಲೂಕು ಚುಟುಕು ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಶ್ರೀ ಶಂಕರ ಸಾಗರ ಉಪಸ್ಥಿತರಿದ್ದರು.