ಸುದ್ದಿ ಕನ್ನಡ ವಾರ್ತೆ
ಚಿಕ್ಕಮಗಳೂರು: ಚಾರ್ಮಾಡಿ ಘಾಟಿನಲ್ಲಿ ಮತ್ತೊಂದು ಅಪಘಾತ ಸಂಭವಿಸಿದ್ದು, ಮಲೆ ಮಾರುತ ಸಮೀಪ ಕಾರೊಂದು 50 ಅಡಿ ಕಂದಕಕ್ಕೆ ಬಿದ್ದ ಘಟನೆ ನಡೆದಿದೆ.
ಶಿವಮೊಗ್ಗದಿಂದ ಧರ್ಮಸ್ಥಳಕ್ಕೆ ತೆರಳುತ್ತಿದ್ದ ಕಾರು ನಿಯಂತ್ರಣ ತಪ್ಪಿ ಪ್ರಪಾತಕ್ಕೆ ಉರುಳಿದರೂ ಅದೃಷ್ಟವಶಾತ್ ಒಳಗಿದ್ದ ಪ್ರಯಾಣಿಕರು ಸಣ್ಣಪುಟ್ಟ ಗಾಯಗಳಿಂದ ಪಾರಾಗಿದ್ದಾರೆ.
ಘಟನೆಯ ವಿವರ ತಿಳಿಯುತ್ತಿದ್ದಂತೆ ಸಮಾಜ ಸೇವಕ ಆರೀಫ್ ಸ್ಥಳಕ್ಕೆ ಧಾವಿಸಿ ಗಾಯಾಳುಗಳನ್ನು ಕೂಡಲೇ ಮೂಡಿಗೆರೆ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಗಾಯಾಳುಗಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.
ಚಾರ್ಮಾಡಿ ಘಾಟಿಯಲ್ಲಿ ಹೀಗುವ ಅಪಘಾತಗಳ ಸಂಖ್ಯೆ ಹೆಚ್ಚುತ್ತಿದ್ದು, ಚಾಲಕರು ಹೆಚ್ಚಿನ ಜಾಗೃತೆಯಿಂದ ವಾಹನ ಚಲಾಯಿಸುವಂತೆ ಪೊಲೀಸರು ಮನವಿ ಮಾಡಿದ್ದಾರೆ.
ತಡೆಗೋಡ ಇಲ್ಲದೆ ಅಪಘಾತ…
ಮಲೆಯ ಮಾರುತ ಸಮೀಪ ತಡೆಗೋಡೆ ಇಲ್ಲದೆ ಹಲವಾರು ಅಪಘಾತಗಳು ಸಂಭವಿಸ್ತಿದ್ದು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ತಡೆಗೋಡೆ ನಿರ್ಮಿಸದೆ ನಿರ್ಲಕ್ಷ ವಹಿಸಿದ್ದು. ತಡೆಗೋಡೆ ನಿರ್ಮಿಸುವಂತೆ ಸ್ಥಳೀಯರು ಆಗ್ರಹಿಸಿದ್ದಾರೆ