ಸುದ್ದಿ ಕನ್ನಡ ವಾರ್ತೆ
ಬೆಳಗಾವಿ:ಬಸವತತ್ವ ಪ್ರಸಾರಕ್ಕಾಗಿ ಸ್ವೀಡನ್ ದೇಶದ ಪ್ರವಾಸ ಕೈಗೊಂಡಿರುವ ಜಾಗತಿಕ ಲಿಂಗಾಯತ ಮಹಾಸಭಾ ಮಹಿಳಾ ಘಟಕದ ಬೆಳಗಾವಿ ಜಿಲ್ಲಾ ಅಧ್ಯಕ್ಷರಾದ ಶ್ರೀಮತಿ ಪ್ರೇಮಕ್ಕ ಗಂಗಾಧರ ಅಂಗಡಿ (ನಾಗನೂರು) ಅವರನ್ನು ಬೆಂಗಳೂರಿನ ಕೇಂದ್ರ ಬಸವ ಸಮಿತಿಯಿಂದ ಕಾರ್ಯಕಾರಿ ಸಮಿತಿಯ ಹಿರಿಯ ಸದಸ್ಯರಾದ ಶ್ರೀ ಮೋಹನ ಬಸನಗೌಡ ಪಾಟೀಲ ಅವರು ಸನ್ಮಾನಿಸಿ, ಗೌರವಿಸಿ, ಶುಭ ಕೋರಿದರು.
ಕನ್ನಡ ಸಾಹಿತ್ಯ ಪರಿಷತ್ತಿನ ಬೈಲಹೊಂಗಲ ತಾಲೂಕು ಅಧ್ಯಕ್ಷರಾದ ಶ್ರೀ ಎನ್.ಆರ್. ಠಕ್ಕಾಯಿ, ಕನ್ನಡ ಜಾನಪದ ಪರಿಷತ್ತಿನ ಬೈಲಹೊಂಗಲ ತಾಲೂಕಿನ ಅಧ್ಯಕ್ಷರಾದ ಶ್ರೀ ಚಂದ್ರಶೇಖರ ರುದ್ರಪ್ಪ ಕೊಪ್ಪದ, ಶರಣ ಸಾಹಿತ್ಯ ಪರಿಷತ್ತಿನ ಬೈಲಹೊಂಗಲ ತಾಲೂಕ ಅಧ್ಯಕ್ಷರಾದ ಶ್ರೀ ಸಂತೋಷ ಕೊಳವಿ, ಜಾಗತಿಕ ಲಿಂಗಾಯತ ಮಹಾಸಭಾ ಬೈಲಹೊಂಗಲ ತಾಲೂಕು ಮಹಿಳಾ ಘಟಕದ ಅಧ್ಯಕ್ಷರಾದ ಶ್ರೀಮತಿ ರಾಜೇಶ್ವರಿ ದೇಮನಗೌಡರ, ಹಿರಿಯ ಸಹಕಾರಿ ಶ್ರೀ ಗಂಗಾಧರ ನಾಗಪ್ಪ ಅಂಗಡಿ (ನಾಗನೂರ)ಉಪಸ್ಥಿತರಿದ್ದರು.