ಸುದ್ದಿಕನ್ನಡ ವಾರ್ತೆ
Hubli: ಹುಬ್ಬಳ್ಳಿ-ಧಾರವಾಡದಲ್ಲಿ ಕಳೆದ 24 ಗಂಟೆಯಲ್ಲಿ ಸುರಿದ ಭಾರಿ ಮಳೆಗೆ ಅಯೋಧ್ಯೆಯ ಒಬ್ಬ ವ್ಯಕ್ತಿ ಹಾಗೂ ಹುಬ್ಬಳ್ಳಿ ನೇಕಾರ ನಗರದ ಇನ್ನೊಬ್ಬ ವ್ಯಕ್ತಿ ಚರಂಡಿಯಲ್ಲಿ ಕೊಚ್ಚಿ ಹೋದ ಘಟನೆ ನಡೆದಿದ್ದು, ನೀರಲ್ಲಿ ಕೊಚ್ಚು ಹೋಗುತ್ತಿದ್ದ ಮತ್ತೋರ್ವ ವ್ಯಕ್ತಿಯನ್ನು ರಕ್ಷಿಸಲಾಗಿದೆ. ಹುಬ್ಬಳ್ಳಿಯಲ್ಲಿ ಭಾರಿ ಮಳೆಗೆ ಕೆಲ ರಸ್ತೆಗಳಂತೂ ನದಿಯಂತೆ ನೀರು ತುಂಬಿ ಹರಿಯುತ್ತಿದ್ದ ದೃಶ್ಯ ಕಂಡುಬಂದಿದೆ.
ಕುಂದಗೋಳ ತಾಲೂಕಿನ ಹಂಚಿನಾಳ ಗ್ರಾಮದಲ್ಲಿ ಟ್ರಾಕ್ಟರ್ ಬಿದ್ದು ಒಬ್ ವ್ಯಕ್ತಿ ಮೃತಪಟ್ಟಿದ್ದಾನೆ. ಬ್ಯಾಹಟ್ಟಿಯಲ್ಲಿ 2 ಕುರಿಗಳು ಹೊಳೆಯಲ್ಲಿ ಕೊಚ್ಚಿ ಹೋಗಿದೆ. ಸುಮಾರು 45 ಮನೆಗಳಿಗೆ ಹಾನಿಯಾಗಿರುವುದಾಗಿ ವರದಿಯಾಗಿದೆ.
ಹವಾಮಾನ ಇಲಾಖೆಯ ಮಾಹಿತಿಯ ಪ್ರಕಾರ ಹುಬ್ಬಳ್ಳಿ ತಾಲೂಕಿನ ಶಿರಗುಪ್ಪಿ ಗ್ರಾಮದಲ್ಲಿ ಬುಧವಾರ 90.8 ಮಿ.ಮಿ ಮಳೆಯಾಗಿದೆ.