ಸುದ್ಧಿಕನ್ನಡ ವಾರ್ತೆ
ಚಿಕ್ಕಮಗಳೂರು: ಬೆಂಗಳೂರಿನಿಂದ ಚಿಕ್ಕಮಗಳೂರಿಗೆ ಪ್ರವಾಸಿಗರನ್ನು ಕರೆತಂದಿದ್ದ ಅವಿನಾಶ (25) ಎಂಬ ಟಿಟಿ ಡ್ರೈವರ್ ಚಿಕ್ಕಮಗಳೂರಿನಲ್ಲಿ ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ನಡೆದಿದೆ.
ಬೆಂಗಳೂರಿನ ಸೋಮನಹಳ್ಳಿ ಮೂಲದ ಅವಿನಾಶ ಕಳೆದ ಮೂರು ವರ್ಷಗಳ ಹಿಂದೆ ಮದುವೆಯಾಗಿದ್ದು, ಇವರಿಗೆ 2 ವರ್ಷದ ಮಗು ಇದೆ. ಟಿಟಿ ಮೂಲಕ ಕರೆತಂದಿದ್ದ ಪ್ರವಾಸಿಗರನ್ನು ಚಿಕ್ಕಮಗಳೂರಿನಲ್ಲಿ ಹೋಂ ಸ್ಟೇ ಬಳಿ ಬಿಟ್ಟ ಬಳಿಕ ಇವರಿಗೆ ಹೃದಯಾಘಾತ ಸಂಭವಿಸಿದೆ. ಕೂಡಲೇ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತಾದರೂ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.
ಈ ಘಟನೆಗೆ ಸಂಬಂಂಧಿಸಿದಂತೆ ಚಿಕ್ಕಮಗಳೂರು ಗ್ರಾಮಾಂತರ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.