Banner Ad

ಸುದ್ದಿ ಕನ್ನಡ ವಾರ್ತೆ

ಕಳೆದ ಒಂದು ವಾರದಿಂದ ನಾಪತ್ತೆಯಾಗಿದ್ದ ಫಾರೆಸ್ಟ್ ಗಾರ್ಡ್​ ಶರತ್ ಅವರು ಶುಕ್ರವಾರ ಬೆತ್ತಲೆ ಸ್ಥಿತಿಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ.

Banner Ad

33 ವರ್ಷದ ಶರತ್ ಅವರು ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಸಖರಾಯಪಟ್ಟಣದ‌ ನೀಲಗಿರಿ ಪ್ಲಾಂಟೇಶನ್ ನಲ್ಲಿ ಕಾರ್ಯ ನಿರ್ವಹಿಸುತ್ತಿರುವಾಗಲೇ ನಾಪತ್ತೆಯಾಗಿದ್ದರು.

ನೀಲಗಿರಿ ಪ್ಲಾಂಟೇಶನ್ ನಿಂದ 5 ಕಿಮೀ ದೂರದಲ್ಲಿ ಇಂದು ಬೆತ್ತಲೆ ಸ್ಥಿತಿಯಲ್ಲಿ ಅನುಮಾನಾಸ್ಪದವಾಗಿ ಶರತ್ (sharat )ಶವ ಪತ್ತೆಯಾಗಿದೆ.

ಶರತ್ ಮೂಲತಃ ಕೊಡಗು ಜಿಲ್ಲೆಯ ಕಾಲೂರು ನಿವಾಸಿಯಾಗಿದ್ದು. ಕಳೆದ ನಾಲ್ಕು ತಿಂಗಳ‌ ಹಿಂದೆ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದ KFDC ವಿಭಾಗದಿಂದ ಸಖರಾಯಪಟ್ಟಣ ಅರಣ್ಯ ಇಲಾಖೆಯ KFDC ವಿಭಾಗಕ್ಕೆ ವರ್ಗಾವಣೆಯಾಗಿದ್ದರು. ನೀಲಗಿರಿ ಪ್ಲಾಂಟೇಶನ್ ನಲ್ಲಿ ಜೂನ್ 24 ರಂದು ಕಾರ್ಯ ನಿರ್ವಹಿಸುತ್ತಿದ್ದ ವೇಳೆ ಶರತ್ ನಿಗೂಢವಾಗಿ ನಾಪತ್ತೆಯಾಗಿದ್ದರು.

Banner Ad