ಸುದ್ದಿ ಕನ್ನಡ ವಾರ್ತೆ

ಕಾರಿಗೆ ಅಪರಿಚಿತ ವಾಹನ ಡಿಕ್ಕಿಯಾಗಿ ಅರ್ಚರೊಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ದಾವಣಗೆರೆ ತಾಲೂಕು ಲಕ್ಕಮುತ್ತೇನಹಳ್ಳಿ
ಗ್ರಾಮದ ರಾಷ್ಟ್ರೀಯ ಹೆದ್ದಾರಿ 48 ರಲ್ಲಿ ಘಟನೆ ನಡೆದಿದೆ.

 

ಯರಗುಂಟೆ ಗ್ರಾಮದ ಡಿ ಎನ್ ಬಾಲಸುಬ್ರಹ್ಮಣ್ಯಂ (54) ಮೃತ ಅರ್ಚಕರು. ಸ್ವಿಫ್ಟ್ ಕಾರಿನಲ್ಲಿ ಬಾಲಸುಬ್ರಹ್ಮಣ್ಯಂ ಬೆಂಗಳೂರಿಗೆ ತೆರಳುತ್ತಿದ್ದಾಗ ಅಪಘಾತ ಸಂಭವಿಸಿದೆ.

ಅಪಘಾತ ನಡೆಸಿದ ಅಪರಿಚಿತ ವಾಹನ ನಿಲ್ಲಿಸದೆ ಪರಾರಿಯಾಗಿದೆ.

ಸ್ಥಳೀಯರಿಂದ ಗಂಭೀರ ಗಾಯಗೊಂಡವರಿಗೆ ಪ್ರಥಮ ಚಿಕಿತ್ಸೆ ನೀಡುವ ವೇಳೆ ಅರ್ಚಕ ಕೊನೆಯುಸಿರೆಳೆದಿದ್ದಾರೆ.

ದಾವಣಗೆರೆ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.