ಸುದ್ದಿ ಕನ್ನಡ ವಾರ್ತೆ
ಕರ್ನಾಟಕ ರಾಜ್ಯದಲ್ಲಿ ಅಬ್ಬರಿಸುತ್ತಿರುವ ಮಳೆ ಈ ತಿಂಗಳ ಕೊನೆಯವರೆಗೂ ಮುಂದುವರೆಯಲಿದೆ ಎಂದು ರಾಜ್ಯ ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಸದ್ಯ ಕರ್ನಾಟಕದಲ್ಲಿ ಹಲವೆಡೆ ಧಾರಾಕಾರ ಮಳೆ ಆಗುತ್ತಿದ್ದು ಈ ಮಳೆ ಇನ್ನು ಐದು ದಿನಗಳ ಕಾಲ ರಾಜ್ಯದಲ್ಲಿ ಮುಂದುವರೆದಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕರಾವಳಿ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದ್ದು ಮಲೆನಾಡು ಜಿಲ್ಲೆಗಳಲ್ಲಿಯೂ ಮಳೆ ಹೆಚ್ಚಾಗುವ ಸಾಧ್ಯತೆ ಇದೆ.

ಶಿವಮೊಗ್ಗ ಚಿಕ್ಕಮಗಳೂರು ಹಾಸನ ಕೊಡಗು ಜಿಲ್ಲೆಗಳಿಗೂ ಜುಲೈ 30 ರವರೆಗೆ ಭಾರೀ ಮಳೆಯ ಮುನ್ಸೂಚನೆ ನೀಡಲಾಗಿದೆ. ಉತ್ತರ ಕನ್ನಡ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಜುಲೈ 29ರ ವರೆಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದ್ದು ಜುಲೈ 30 ಹಾಗೂ 31 ರಂದು ಎಲ್ಲೋ ಅಲರ್ಟ್ ಘೋಷಿಸಲಾಗಿದೆ.

ರಾಜಧಾನಿ ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣ ಮುಂದುವರಿದಿದ್ದು ಮುಂದಿನ ವರ್ಷದವರೆಗೂ ಇದೇ ವಾತಾವರಣ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.