Banner Ad

ಸುದ್ದಿ ಕನ್ನಡ ವಾರ್ತೆ
ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲೆಯ ಮುಳ್ಳಯ್ಯನಗಿರಿಯಲ್ಲಿ ಸುಮಾರು 250 ಅಡಿ ಎತ್ತರದಿಂದ ಕಾರು ಪ್ರಪಾತಕ್ಕೆ ಬಿದ್ದ ಘಟನೆ ನಡೆದಿದೆ. ಕಾರಿನಲ್ಲಿದ್ದ ಐವರು ಗಂಭೀರವಾಗಿ ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ.

ಮುಳ್ಳಯ್ಯನಗಿರಿ ಸಮೀಪದ ಕವಿಕಲ್ ಗಂಡಿ ಬಳಿ ಈ ಘಟನೆ ನಡೆದಿದೆ. ತೆಲಂಗಾಣ ಮೂಲದ ಈ ಕಾರಿನಲ್ಲಿ ಐದು ಜನ ಪ್ರಯಾಣಿಸುತ್ತಿದ್ದರು ಎಂಬ ಮಾಹಿತಿ ಲಭ್ಯವಾಗಿದೆ. ಕಾರಿನಲ್ಲಿದ್ದ ಎಲ್ಲರೂ ಗಂಭೀರವಾಗಿ ಗಾಯಗೊಂಡಿದ್ದಾರೆ. 250 ಅಡಿ ಎತ್ತರದಿಂದ ಕಾರು ಬೀಳುವಾಗ ಮರ ರೆಂಬೆಕೊಂಬೆಗಳಿಗೆ ಸಿಲುಕಿ ಕಾರಿನ ವೇಗ ಕಡಿಮೆಯಾಗಿದೆ ಎಂದು ಅಂದಾಜಿಸಲಾಗಿದೆ.

Banner Ad

ಗಾಯಾಳುಗಳನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಘಟನಾ ಸ್ಥಳಕ್ಕೆ ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Banner Ad