ಸುದ್ದಿ ಕನ್ನಡ ವಾರ್ತೆ

ಬೆಂಗಳೂರು: ಖ್ಯಾತ  ಹಾಸ್ಯ ನಟ ಹಾಗೂ ರಂಗಭೂಮಿ ಕಲಾವಿದ  ರಾಜು ತಾಳಿಕೋಟೆ ಅವರು  ಹೃದಯಾಘಾತದಿಂದ ಇಂದು ನಿಧನರಾಗಿದ್ದಾರೆ.

ಉಡುಪಿಯ ಮಣಿಪಾಲ್ ಆಸ್ಪತ್ರೆಯಲ್ಲಿ ಅವರು ಕೊನೆಯುಸಿರೆಳೆದಿದ್ದಾರೆ. ಅವರಿಗೆ 59 ವರ್ಷ ವಯಸ್ಸಾಗಿತ್ತು.

ವಿಜಯಪುರದ ಸಿಂದಗಿ ತಾಲ್ಲೂಕಿನ ಚಿಕ್ಕಸಿಂದಗಿ ಗ್ರಾಮದ ಮೂಲದವರಾಗಿದ್ದ ರಾಜು ತಾಳಿಕೋಟೆ ಅವರು, ಉತ್ತರ ಕರ್ನಾಟಕದ ರಂಗಭೂಮಿಯಲ್ಲಿ ‘ಖಾಸ್ಗತೇಶ್ವರ’ ನಾಟಕ ಮಂಡಳಿಯ ಮಾಲೀಕರಾಗಿ, ಕುಡುಕನ ಪಾತ್ರಗಳ ಮೂಲಕ ಮನೆಮಾತಾಗಿದ್ದರು.

ಅವರ ನಿಧನದ ಸುದ್ದಿ ತಿಳಿದು ಚಿತ್ರರಂಗದ ಗಣ್ಯರು ಮತ್ತು ಅಭಿಮಾನಿಗಳು ಸಾಮಾಜಿಕ ಜಾಲತಾಣಗಳಲ್ಲಿ ಸಂತಾಪ ಸೂಚಿಸುತ್ತಿದ್ದಾರೆ.