ಸುದ್ಧಿಕನ್ನಡ ವಾರ್ತೆ
ಬೆಂಗಳೂರು: ಕರ್ನಾಟಕದ ರಾಜಧಾನಿ ಬೆಂಗಳೂರಿನಲ್ಲಿ ಮಳೆಯ ಅಬ್ಬರಕ್ಕೆ ಜನಜೀವನ ಅಸ್ತವ್ಯಸ್ಥಗೊಂಡಿದೆ. ನಿರ್ಮಾಣ ಹಂತದಲ್ಲಿದ್ದ ಕಟ್ಟಡ ಕುಸಿತ ಪ್ರಕರಣದಲ್ಲಿ ಸಾವಿನ ಸಂಖ್ಯೆ ಹೆಚ್ಚುತ್ತಲೇ ಇದೆ. ಕಟ್ಟಡದ ಅವಶೇಷಗಳ ಅಡಿಯಲ್ಲಿ ಎನ್ ಡಿ ಆರ್ ಎಫ್ ಮತ್ತು ಎಸ್ ಡಿ ಆರ್ ಎಫ್ ತಂಡಗಳು ಮತ್ತೆರಡು ಮೃತ ದೇಹಗಳನ್ನು ಹೊರತೆಗೆದಿವೆ.
ಬೆಂಗಳೂರಿನಲ್ಲಿ ನಿರ್ಮಾಣ ಹಂತದಲ್ಲಿರುವ ಕಟ್ಟಡ ಕುಸಿತ ಪ್ರಕರಣದಲ್ಲಿ ಸಾವಿನ ಸಂಖ್ಯೆ 8 ಕ್ಕೆ ಏರಿದೆ. ಇದುವರೆಗೆ 13 ಜನರನ್ನು ರಕ್ಷಿಸಲಾಗಿದೆ. ಇನ್ನೂ ಕೆಲವರು ಈ ಕಟ್ಟಡದ ಅವಶೇಷಗಳ ಅಡಿಯಲ್ಲಿ ಸಿಲುಕಿಕೊಂಡಿರುವ ಶಂಕೆ ವ್ಯಕ್ತವಾಗುತ್ತಿದೆ.
ಬೆಂಗಳೂರಿನ ಹೆಣ್ಣೂರು ಬಳಿ ಬಾಬುಸಾಬ ಪಾಳ್ಯದಲ್ಲಿ ಅಕ್ಟೋಬರ್ 22 ರಂದು ಸಂಜೆ ನಿರ್ಮಾಣ ಹಂತದಲ್ಲಿದ್ದ ಕಟ್ಟಡ ಕುಸಿತಗೊಂಡಿತ್ತುತೀ ಪ್ರಕರಣದಲ್ಲಿ ಕಟ್ಟಡ ಮಾಲೀಕ ಭುವನ್ ರೆಡ್ಡಿ ಹಾಗೂ ಗುತ್ತಿಗೆ ದಾರನನ್ನು ಪೋಲಿಸರು ಬಂಧಿಸಿದ್ದಾರೆ