ಸುದ್ದಿ ಕನ್ನಡ ವಾರ್ತೆ
ಬೆಂಗಳೂರು: ಕರ್ನಾಟಕದ ರಾಜ್ಯಪಾಲ ಥಾವರ್ ಚಂದ್ ಗೆಲ್ಹೊಟ್ ರವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ವೈರಲ್ ಫೀವರ್ ನಿಂದಾಗಿ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದೆ .ಈ ಹಿನ್ನೆಲೆಯಲ್ಲಿ ರಾಜ್ಯಪಾಲರನ್ನು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ವೈದ್ಯರು ರಾಜ್ಯಪಾಲರ ಆರೋಗ್ಯ ಪರೀಕ್ಷಿಸಿದ್ದು ಆರೋಗ್ಯ ಸ್ಥಿರವಾಗಿದೆ ಎಂಬ ಮಾಹಿತಿ ನೀಡಿದ್ದಾರೆ.