ಸುದ್ಧಿಕನ್ನಡ ವಾರ್ತೆ
ಬೆಟಗೇರಿ: ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಡಾ.ಬಿ.ಆರ್.ಅಂಬೇಡ್ಕರ ಅಭಿಮಾನಿ ಬಳಗದ ಸಹಯೋಗದಲ್ಲಿ ಡಾ.ಬಿ.ಆರ್.ಅಂಬೇಡ್ಕರ ವೃತ್ತದಲ್ಲಿ ಡಿ.6ರಂದು ನಡೆದ ಡಾ. ಬಿ.ಆರ್.ಅಂಬೇಡ್ಕರ ಅವರ ಮಹಾ ಪರಿನಿರ್ವಾಣ ದಿನಾಚರಣೆ ಕಾರ್ಯಕ್ರಮ ನಡೆಯಿತು.
ಸ್ಥಳೀಯ ಡಾ. ಬಿ.ಆರ್.ಅಂಬೇಡ್ಕರ ಅಭಿಮಾನಿ ಬಳಗದ ಸಂಚಾಲಕ ಚಿದಾನಂದ ತಳವಾರ ಡಾ.ಬಿ.ಆರ್.ಅಂಬೇಡ್ಕರ ಅವರ ಬದುಕಿನ ಮತ್ತು ಮಹಾಪರಿನಿರ್ವಾಣ ದಿನದ ಕುರಿತು ಪ್ರಾಸ್ತಾವಿಕವಾಗಿ ಮಾತನಾಡಿದರು. ವಿಜಯ ಹಿರೇಮಠ ಅವರು ಡಾ.ಬಿ.ಆರ್.ಅಂಬೇಡ್ಕರ ಭಾವಚಿತ್ರಕ್ಕೆ ಪೂಜೆ, ಪುಷ್ಪಾರ್ಪನೆ ಸಮರ್ಪನೆ ಕಾರ್ಯಕ್ರಮ ನೆರವೇರಿಸಿದರು.
ಅಶೋಕ ಹರಿಜನ, ರವೀಂದ್ರ ದಾನವ್ವಗೋಳ, ಶ್ರೀಶೈಲ ತಳವಾರ, ಪಂಡಿತ ಸಣ್ಣಕ್ಕಿ, ಚಾಯಪ್ಪ ಗಜಾಕೋಶ, ಸುರೇಶ ತಳವಾರ, ಉಮೇಶ ಹರಿಜನ, ಮಾರುತಿ ಪೋಳ, ಶಿವಾನಂದ ಹರಿಜನ, ಮೇಳೆಪ್ಪ ಹರಿಜನ, ಮಾರುತಿ ಹರಿಜನ, ಸ್ಥಳೀಯ ಡಾ. ಬಿ.ಆರ್.ಅಂಬೇಡ್ಕರ ಅಭಿಮಾನಿ ಬಳಗದ ಪದಾಧಿಕಾರಿಗಳು, ಸದಸ್ಯರು, ಮತ್ತೀತರರು ಇದ್ದರು.
