ಸುದ್ದಿ ಕನ್ನಡ ವಾರ್ತೆ

ಗುರುವಾರ ರಾತ್ರಿ 10 ಗಂಟೆ ವೇಳೆಯಲ್ಲಿ ಚಿಕ್ಕಬಳ್ಳಾಪುರ ತಾಲೂಕಿನ ಅಜ್ಜವಾರ ಗೇಟ್ ಬಳಿ ಟಪ್ಪರ್ ಲಾರಿಗೆ ಬೈಕ್ ಡಿಕ್ಕೀ ಹೊಡೆದ ಪರಿಣಾಮ ಬೈಕ್‌ನಲ್ಲಿದ್ದ ನಾಲ್ವರು ಯುವಕರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಚಿಕ್ಕಬಳ್ಳಾಪುರದಿಂದ ಬೈಕ್‌ನಲ್ಲಿ ಹೋಗುತ್ತಿದ್ದ ಯುವಕರು ಅಜ್ಜವಾರ ಕ್ರಾಸ್‌ನಲ್ಲಿ ತಿರುವು ಪಡೆಯಲು ಯತ್ನಿಸಿದ್ದಾರೆ. ಆದರೆ ವೇಗವಾಗಿ ಬರುತ್ತಿದ್ದ ಟಿಪ್ಪರ್ ಈ ವೇಳೆ ನಿಯಂತ್ರಣ ತಪ್ಪಿ ಬೈಕ್‌ಗೆ ಡಿಕ್ಕಿಯಾಗಿದೆ. ರಭಸದ ಡಿಕ್ಕಿಯಿಂದಾಗಿ ಬೈಕ್‌ನಲ್ಲಿದ್ದ ಯುವಕರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಮೃತ ಯುವಕರನ್ನು ಅಜ್ಜವಾರ ಗ್ರಾಮದ ಗ್ರಾಮದ ಮುನಿರಾಜು ರವರ ಮಕ್ಕಳಾದ ನಂದೀಶ,ನರಸಿAಹ, ಗ್ರಾಮಪಂಚಾಯಿತಿ ಅಧ್ಯಕ್ಷ ಮುನಿರಾಜುರವರ ಸಂಬAಧಿಕರಾದ ಮನೋಜ್, ಅರುಣ್ ಎಂದು ಗುರುತಿಸಲಾಗಿದೆ. ನರಸಿಂಹ ಕೇವಲ ಆರು ತಿಂಗಳ ಹಿಂದೆಯಷ್ಟೇ ಪ್ರೀತಿಸಿ ವಿವಾಹವಾಗಿದ್ದ ಎಂದು ತಿಳಿದು ಬಂದಿದೆ. ಗ್ರಾಮದಲ್ಲಿ ಯುವಕರ ಸಾವಿನ ಆಕ್ರಂದನ ಮುಗಿಲು ಮುಟ್ಟಿದೆ.ಕೆಲಸಕ್ಕೆ ಹೋಗಿ ಮನೆಗೆ ಹಿಂದಿರುಗುತ್ತಿದ್ದ ನಂದೀಶನನ್ನು ಕರೆತರಲು ನರಸಿಂಹ ಹೋಗಿದ್ದ ವೇಳೆ ಈ ಘಟನೆ ಸಂಭವಿಸಿದೆ