ಸುದ್ದಿ ಕನ್ನಡ ವಾರ್ತೆ
ಸಿದ್ದಾಪುರ: ಕೊಪ್ಪಳ ಜಿಲ್ಲೆಯ ಕಾರಟಗಿ ತಾಲೂಕು ಸಿದ್ದಾಪುರ ಗ್ರಾಮದ ಖಾಸಗಿ ಶಾಲೆಯಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದ ಸುಫೀಯಾ ಎಂಬ ವಿದ್ಯಾರ್ಥಿನಿ ಡೆಂಘಿಗೆ ಬಲಿಯಾದ ಘಟನೆ ಗುರುವಾರ ನಡೆದಿದೆ.

ಸಿದ್ದಾಪುರ ಗ್ರಾಮದ ಖಾಸಗಿ ಶಿಕ್ಷಣ ಸಂಸ್ಥೆಯಲ್ಲಿ ವಿದ್ಯಾರ್ಥಿನಿ 6ನೇ ತರಗತಿ ಓದುತ್ತಿದ್ದಳು. ಸೋಮವಾರ ಜ್ವರ ಕಾಣಿಸಿಕೊಂಡ ಹಿನ್ನಲೆಯಲ್ಲಿ ಗ್ರಾಮದ ಖಾಸಗಿ ಕ್ಲಿನಕ್ ವೊಂದರಲ್ಲಿ ಚಿಕಿತ್ಸೆ ಪಡೆದಿದ್ದಳು. ಆದರೂ, ಸಹ ಜ್ವರ ಕಡಿಮೆಯಾಗಿರಲಿಲ್ಲ.

ಹೀಗಾಗಿ ಸಿಂಧನೂರಿನ ಆಸ್ಪತ್ರೆಯೊಂದರಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿತ್ತು. ಅಲ್ಲಿಯೂ ಸಹ ಆರೋಗ್ಯದಲ್ಲಿ ಚೇತರಿಕೆ ಕಾಣದ ಹಿನ್ನೆಲೆಯಲ್ಲಿ ಮಂಗಳವಾರ ಬಳ್ಳಾರಿ ಜಿಲ್ಲೆಯ ಆಸ್ಪತ್ರೆವೊಂದರಲ್ಲಿ ದಾಖಲು ಮಾಡಲಾಗಿತ್ತು. ಆದರೂ, ಚಿಕಿತ್ಸೆ ಫಲಕಾರಿಯಾಗದೆ ಗುರುವಾರ ಬೆಳಗ್ಗೆ ನಿಧನ ಹೊಂದಿದ್ದಾಳೆ.