ಸುದ್ದಿ ಕನ್ನಡ ವಾರ್ತೆ
ಯಳಂದೂರು: ತಾಲ್ಲೂಕಿನ ಹೊನ್ನೂರು ಗ್ರಾಮ ಹಾಲು ಉತ್ಪಾದಕರ ಸಹಕಾರ ಸಂಘದ ಸಭಾಭವನದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣ ಅಭಿವೃದ್ಧಿ ಯೋಜನೆ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ವಲಯ ಮಟ್ಟದ ಒಕ್ಕೂಟ ಪದಾಧಿಕಾರಿಗಳ ತರಬೇತಿ ಕಾರ್ಯಕ್ರಮವನ್ನು ಜಿಲ್ಲಾ ನಿರ್ದೇಶಕರಾದ ದಿನೇಶ್ ರವರು ಉದ್ಘಾಟಿಸಿ ಮಾತನಾಡಿ ಶ್ರೀ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆ ಮೂಲಕ ಮಹಿಳೆಯರ ಆರ್ಥಿಕ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡುತ್ತಾ ಬಂದಿದ್ದು ಅನೇಕ ವರ್ಷಗಳಿಂದ ಒಕ್ಕೂಟದ ಸಮಗ್ರ ಅಭಿವೃದ್ಧಿ ಹಿತ ದೃಷ್ಟಿಯಿಂದ ಮೈಲಾರ್ಗೆ ಸಾಲ ಸೌಲಭ್ಯ ಸ್ವಯಂ ಉದ್ಯೋಗ , ತರಬೇತಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಬರುತ್ತಿದ್ದು ಸಹ ತರಬೇತಿ ಕಾರ್ಯಕ್ರಮದಲ್ಲಿ ಭಾಗವಹಿಸಿರುವ ಮಹಿಳೆಯರು ತರಬತ್ತಿಯನ್ನು ಸದ್ಬಳಕೆ ಮಾಡಿಕೊಂಡು ಸಂಸ್ಥೆ ವತಿಯಿಂದ ಪಡೆದಂತ ಸಾಲ ಸೌಲಭ್ಯ ಸಹಾಯಧನ ನೆರವು ಸೌಲಭ್ಯಗಳನ್ನು ಸದ್ಬಳಕೆ ಮಾಡಿಕೊಂಡು ಆರ್ಥಿಕವಾಗಿ ಸ್ವಾವಲಂಬನೆ ಬದುಕು ಕಟ್ಟಿಕೊಳ್ಳಬೇಕೆಂದು ಸಲಹೆ ನೀಡಿದರು.
ಈ ತರಬೇತಿ ಕಾರ್ಯಕ್ರಮದಲ್ಲಿ ಯೋಜನಾಧಿಕಾರಿ ದಿನರಾಜಶೆಟ್ಟಿ, ವಲಯದ ಮೇಲ್ವಿಚಾರಕರಾದ ಆನಂದ , ವಿಮಾ ಸಮನ್ವಯ ಅಧಿಕಾರಿ ನಾರಾಯಣ್ ಹಾಗೂ ತಾಲೋಕು ವಿಚಕ್ಷಣಾಧಿಕಾರಿ, ಸೇವಾಪ್ರತಿನಿಧಿಗಳು, ಹೊನ್ನೂರು ವಲಯದ ಮಹಿಳಾ ಒಕ್ಕೂಟದ ಪದಾಧಿಕಾರಿಗಳು ಹಾಜರಿದ್ದರು . ವರದಿ ಎಸ್.ಪುಟ್ಟಸ್ವಾಮಿಹೊನ್ನೂರು ಚಾಮರಾಜನಗರ ಜಿಲ್ಲೆ
