ಸುದ್ದಿ ಕನ್ನಡ ವಾರ್ತೆ

. ಕೊಡಗು : ಎಸ್‌ಡಿಪಿಐ ರಾಜ್ಯಾಧ್ಯಕ್ಷ ಅಬ್ದುಲ್
ಮಜೀದ್‌ ಪ್ರಯಾಣಿಸುತ್ತಿದ್ದ ಕಾರಿನಲ್ಲಿ ಆಕಸ್ಮಿಕ ಬೆಂಕಿ ಕಾಣಿಸಿಕೊಂಡ ಸುಟ್ಟು ಹೋದ ಘಟನೆ ಕುಶಾಲನಗರ ತಾಲೂಕಿನ ಆನೆಕಾಡು ಬಳಿ ನಡೆದಿದೆ.

ಘಟನೆಯಲ್ಲಿ ಅಬ್ದುಲ್ ಮಜೀದ್ ಹಾಗೂ ಕಾರು ಚಾಲಕ ಯಾವುದೇ ಅಪಾಯಕ್ಕೀಡಾಗದೆ ಅದೃಷ್ಟವಶಾತ್ ಪಾರಾಗಿದ್ದಾರೆ. ಮಾಹಿತಿಯ ಪ್ರಕಾರ ಮಡಿಕೇರಿಯಿಂದ ಮೈಸೂರು ಕಡೆಗೆ ಕ್ರೇಟಾ ಕಾರು ತೆರಳುತಿತ್ತು. ಇದ್ದಕ್ಕಿದ್ದಂತೆ ಕಾರಿನಲ್ಲಿ ಇದ್ದಕ್ಕಿದ್ದಂತೆ ಬೆಂಕಿ ಕಾಣಿಸಿಕೊಂಡಿದ್ದರಿಂದ ಎಸ್‌ಡಿಪಿಐ ರಾಜ್ಯಾಧ್ಯಕ್ಷ ಅಬ್ದುಲ್ ಮಜೀದ್ ಹಾಗೂ ಚಾಲಕ ಕಾರಿನಿಂದ ಇಳಿದು ಸುರಕ್ಷಿತವಾಗಿ ಹೊರಬಂದಿದ್ದಾರೆ.

ಕೆಲವೇ ಕ್ಷಣಗಳಲ್ಲಿ ಬೆಂಕಿ ಇಡೀ ಕಾರನ್ನು ವ್ಯಾಪಿಸಿ, ಸಂಪೂರ್ಣ ಸುಟ್ಟು ಕರಕಲಾಗಿದೆ. ಸುದ್ದಿ ತಿಳಿದ ಕುಶಾಲನಗರ ಅಗ್ನಿಶಾಮಕ ದಳದ ಸಿಬ್ಬಂದಿಗಳು ತಕ್ಷಣ ಸ್ಥಳಕ್ಕೆ ಧಾವಿಸಿ ಬೆಂಕಿಯನ್ನು ನಂದಿಸಿದ್ದಾರೆ. ಆದರೆ ಅಷ್ಟರಲ್ಲಿ ಕಾರು ಸಂಪೂರ್ಣವಾಗಿ ಹಾನಿಗೊಳಗಾಗಿದೆ. ಈ ಕುರಿತು ಸಂಬಂಧಿಸಿದ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ.