ಸುದ್ದಿ ಕನ್ನಡ ವಾರ್ತೆ
ಗದಗ:ಸಂಕಧಾಳ ರಸ್ತೆಯ ತಡೆಗೋಡೆ ಕಾಮಗಾರಿ ಗುತ್ತಿಗೆ ವಿಚಾರದಲ್ಲಿ ಲಂಚ ಸ್ವೀಕರಿಸುವಾಗ ಶಿರಹಟ್ಟಿಯ ಬಿಜೆಪಿ ಶಾಸಕ ಡಾ. ಚಂದ್ರು ಲಮಾಣಿ ಸೇರಿ ಮೂವರು ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.ಶಾಸಕ ಚಂದ್ರು ಲಮಾಣಿಗೆ ಸೇರಿದ ಲಕ್ಷ್ಮೀಶ್ವರ ಪಟ್ಟಣದಲ್ಲಿರುವ ಬಾಲಾಜಿ ಆಸ್ಪತ್ರೆ ಮೇಲೆ ಧಾರವಾಡ ಲೋಕಾಯುಕ್ತ ಎಸ್ಪಿ ಸಿದ್ದಲಿಂಗಪ್ಪ ನೇತೃತ್ವದ ತಂಡ ದಾಳಿ ನಡೆಸಿದ್ದು, ಶಾಸಕ ಚಂದ್ರು ಲಮಾಣಿ,ಸರ್ಕಾರಿ ಪಿಎ ಮಂಜುನಾಥ ವಾಲ್ಮೀಕಿ ಹಾಗೂ ಖಾಸಗಿ ಪಿಎ ಗುರು ಲಮಾಣಿ ಅವರನ್ನೂ ಲೋಕಾಯುಕ್ತ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.ಸಂಕಧಾಳ ಗ್ರಾಮದ ರಸ್ತೆ ಬದಿಯ ತಡೆಗೋಡೆ ನಿರ್ಮಾಣಕ್ಕೆ ಸುಮಾರು 1 ಕೋಟಿ ರೂಪಾಯಿ ವೆಚ್ಚದ ಕಾಮಗಾರಿಗೆ ಸಂಬಂಧಿಸಿ ಗುತ್ತಿಗೆದಾರ ವಿಜಯ ಪೂಜಾರ ಅವರ ಬಳಿ 11 ರೂಪಾಯಿ ಲಂಚದ ಬೇಡಿಕೆ ಇಟ್ಟಿದ್ದರು. ಇಂದು 5 ಲಕ್ಷ ರೂ. ಲಂಚ ಪಡೆಯುತ್ತಿದ್ದಾಗಲೇ ಬಂಧಿಸಿದ್ದಾರೆ.
ಪೂಜಾರ ಲೋಕಾಯುಕ್ತ ಪೊಲೀಸರನ್ನು ಸಂಪರ್ಕಿಸಿ ದೂರು ನೀಡಿದ್ದರು. ಪೊಲೀಸರು ಭ್ರಷ್ಟಾಚಾರ ತಡೆ ಕಾಯ್ದೆಯಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು, ಬಲೆ ಬೀಸಿ ರೆಡ್ ಹ್ಯಾಂಡ್ ಆಗಿ ಹಿಡಿದಿದ್ದಾರೆ.
