ಸುದ್ದಿ ಕನ್ನಡ ವಾರ್ತೆ

ಹುಬ್ಬಳ್ಳಿ- ಹುಬ್ಬಳ್ಳಿಯ ಡಾ.ಸಂಗಮೇಶ ಹಂಡಿಗಿ ಸಾಹಿತ್ಯ ಪ್ರತಿಷ್ಠಾನದ ಸಂಗಮ ಸಿರಿ ರಾಜ್ಯಮಟ್ಟದ ಪ್ರಶಸ್ತಿ ಪುರಸ್ಕೃತರಾದ ಶರಣ ಸಾಹಿತ್ಯ ಕ್ಷೇತ್ರದ ಸಾಧಕರಾದ ಕೇಂದ್ರ ಸಾಹಿತ್ಯ ಅಕಾಡೆಮಿಯ ಸದಸ್ಯರು,ಬೆಂಗಳೂರು ಆಕಾಶವಾಣಿಯ ನಿವೃತ್ತ ನಿರ್ದೇಶಕರಾದ ಡಾ.ಬಸವರಾಜ ಸಾದರ, ಪುಣೆಯ ಬಸವ ತಿಳುವಳಿಕೆ ಮತ್ತು ಸಂಶೋಧನಾ ಕೇಂದ್ರದ ಅಧ್ಯಕ್ಷರಾದ ಡಾ. ಶಶಿಕಾಂತ ಪಟ್ಟಣ ಅವರಿಗೆ ಹುಬ್ಬಳ್ಳಿಯ ವಿದ್ಯಾನಗರದ ಪಿ.ಸಿ.ಜಾಬಿನ ವಿಜ್ಞಾನ ಮಹಾವಿದ್ಯಾಲಯದ ಸೆಮಿನಾರ ಹಾಲದಲ್ಲಿ ನಡೆದ ಕಾರ್ಯಕ್ರಮದಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಬೆಳಗಾವಿ ಜಿಲ್ಲೆಯ ಮಾಜಿ ಅಧ್ಯಕ್ಷರಾದ ಮೋಹನ ಬಸನಗೌಡ ಪಾಟೀಲ, ಕೇಂದ್ರ ಬಸವ ಸಮಿತಿಯ ಬಸವ ಪಥ ಸದಸ್ಯರು, ಖ್ಯಾತ ಉದ್ದಿಮೆದಾರರಾದ ಮಿಥುನ ವಿಠ್ಠಲ ಹುಗ್ಗಿ ಅವರು ಸನ್ಮಾನಿಸಿ ಅಭಿನಂದಿಸಿದರು.
ರಾಯನಾಳ ರೇವಣಸಿದ್ದೇಶರ ಮಠದ ಪರಮಪೂಜ್ಯಶ್ರೀ ಅಭಿನವ ರೇವಣಸಿದೇಶವರ ಮಾಹಾಸ್ವಾಮಿಗಳು ಸಾನ್ನಿಧ್ಯ ವಹಿಸಿದ್ದರು. ಡಾ.ಸಂಗಮೇಶ ಹಂಡಿಗಿ ಸಾಹಿತ್ಯ ಪ್ರತಿಷ್ಠಾನದ ಅಧ್ಯಕ್ಷರು,ವಾಣಿಜ್ಯ ತೆರಿಗೆ ಇಲಾಖೆಯ ವಿಶ್ರಾಂತ ಉಪ ಆಯುಕ್ತರಾದ ಜಿ.ಬಿ.ಗೌಡಪ್ಪಗೋಳ ಅವರು ಅಧ್ಯಕ್ಷತೆ ವಹಿಸಿದ್ದರು.
ಧಾರವಾಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರು,ವಿಜಯ ಕರ್ನಾಟಕ ದಿನಪತ್ರಿಕೆಯ ಸಂಪಾದಕರಾದ ಡಾ.ಬಂಡು ಕುಲಕರ್ಣಿ,ಧಾರವಾಡ ಜಿಲ್ಲಾ ಪಂಚಾಯತ ಉಪ ಕಾರ್ಯದರ್ಶಿ,ಸಾಹಿತಿ ಮಲ್ಲಿಕಾರ್ಜುನ ತೊದಲಬಾಗಿ ಅವರನ್ನು ಡಾ.ಸಂಗಮೇಶ ಹಂಡಿಗಿ ಪ್ರತಿಷ್ಠಾನದ ವತಿಯಿಂದ ಸನ್ಮಾನಿಸಲಾಯಿತು.
ಹಿರಿಯ ಸಾಹಿತಿಗಳಾದ ಮಹಾಂತಪ್ಪ ನಂದೂರ ಪ್ರಶಸ್ತಿ ಪುರಸ್ಕೃತರ ಕುರಿತು ಮಾತನಾಡಿದರು. ಗೌರವಾಧ್ಯಕ್ಷರಾದ ಗಣಪತಿ ಗಂಗೋಳಿ ವೇದಿಕೆಯ ಮೇಲಿದ್ದರು.
ಪ್ರಧಾನ ಕಾರ್ಯದರ್ಶಿಗಳಾದ ವೀರೇಶ ಹಂಡಿಗಿ ಸ್ವಾಗತಿಸಿದರು. ಡಾ.ಬಿ.ಎಸ್.ಮಾಳವಾಡ ಪರಿಚಯಿಸಿದರು. ಪ್ರೊ:ಗುರು ಹಂಜಗಿಮಠ ನಿರೂಪಿಸಿದರು, ರವೀಂದ್ರ ರಾಮದುರ್ಗಕರ ವಂದಿಸಿದರು.