Banner Ad

ಸುದ್ದಿ ಕನ್ನಡ ವಾರ್ತೆ

ಬೆಂಗಳೂರು: 2025-26ನೇ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಫಲಿತಾಂಶ ಗುರುವಾರ ಪ್ರಕಟವಾಗಿದ್ದು, ಫಲಿತಾಂಶದಲ್ಲಿ ಭಾರೀ ಹೆಚ್ಚಳವಾಗಿದೆ. ಏಪ್ರಿಲ್ 9ರ ಗುರುವಾರ ಮಧ್ಯಾಹ್ನ 3 ಗಂಟೆಗೆ ಪರೀಕ್ಷೆ- 1 ರ ಫಲಿತಾಂಶ ಪ್ರಕಟಗೊಂಡಿದೆ.

Banner Ad

ಈ ಬಾರಿ ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶದಲ್ಲಿ ಕಳೆದ ವರ್ಷಕ್ಕಿಂತ ಶೇ. 12 ರಷ್ಟು ಹೆಚ್ಚು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ವಿಜ್ಞಾನ ವಿಭಾಗದಲ್ಲಿ ಮಂಗಳೂರು ಎಕ್ಸ್‌ಪರ್ಟ್ ಪಿಯು ಕಾಲೇಜಿನ ಶಮನ್ಯು ಎಸ್ ಶೆಟ್ಟಿ, ನಂದನ್ ನಾಯಕ್ 600ಕ್ಕೆ 598 ಅಂಕ ಪಡೆದು ರಾಜ್ಯಕ್ಕೆ ಟಾಪರ್ ಆಗದ್ದಾರೆ. ಕಾರ್ಕಳದ ಜ್ಞಾನಸುಧಾ ಪಿಯು ಕಾಲೇಜಿನ ವಿದ್ಯಾರ್ಥಿಗಳಾದ ವೈಷ್ಣವಿ, ಅನರ್ವಿ ಹಾಗೂ ಮಾನ್ಯ 600ರಲ್ಲಿ 597 597 ಅಂಕ ಪಡೆದು ದ್ವಿತೀಯರಾಗಿದ್ದಾರೆ. ವಾಣಿಜ್ಯ ವಿಭಾಗದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಆಳ್ವಾಸ್‌ ಕಾಲೇಜು ವಿದ್ಯಾರ್ಥಿನಿ ದಿಶಾ ಹಾಗೂ ಬೆಂಗಳೂರಿನ ಜೈನ್ ಕಾಲೇಜಿನ ಅದಿತಿ ಬಾಪು ಅವರು 600ಕ್ಕೆ 600 ಅಂಕ ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದಿದ್ದಾರೆ. ಕಲಾ ವಿಭಾಗದಲ್ಲಿ ವಿಜಯನಗರ ಜಿಲ್ಲೆಯ ಕೊಟ್ಟೂರಿನ ಇಂದೂ ಪಿಯು ಕಾಲೇಜಿನ ಕಲಾ ವಿಭಾಗದ ಇಬ್ಬರು ವಿದ್ಯಾರ್ಥಿನಿಯರಾದ ಸಂಗೀತಾ ಹಾಗೂ ಅರ್ಚನಾ ತಲಾ 598 ಅಂಕಗಳನ್ನು ಪಡೆಯುವ ಮೂಲಕ ಜಂಟಿ ಪ್ರಥಮ ಸ್ಥಾನ ಹಂಚಿಕೊಂಡಿದ್ದಾರೆ.ಈ ಬಾರಿ ಪರೀಕ್ಷೆ ಕುಳಿತ ಪರೀಕ್ಷೆಗೆ ಕುಳಿತ 7,10,363 ವಿದ್ಯಾರ್ಥಿಗಳ ಪೈಕಿ ಸುಮಾರು 6.10 ಲಕ್ಷ ವಿದ್ಯಾರ್ಥಿಗಳು ತೇರ್ಗಡೆಯಾಗಿ ಶೇ.86ರಷ್ಟು ಫಲಿತಾಂಶ ಬಂದಿದೆ. ಕಳೆದ ವರ್ಷ ಶೇ.73.45ರಷ್ಟು ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದರು. ಇದರೊಂದಿಗೆ ಈ ಬಾರಿ ಪಿಯುಸಿ ಫಲಿತಾಂಶದಲ್ಲಿ ಭಾರೀ ಸುಧಾರಣೆ ಕಂಡು ಬಂದಿದೆ. ಫಲಿತಾಂಶವನ್ನು karresults.nic.in ಅಥವಾ Karnataka one ಮೊಬೈಲ್ ಆ್ಯಪ್ ಮೂಲಕ ಪಡೆಯಬಹುದು. ವಿದ್ಯಾರ್ಥಿಗಳ ನೊಂದಾಯಿತ ಮೊಬೈಲ್‌ ಸಂಖ್ಯೆಗೆ ಮಂಡಳಿಯೇ ವಾಟ್ಸಾಪ್ ಅಥವಾ ಎಸ್‌ಎಂಎಸ್‌ ಮೂಲಕ ಫಲಿತಾಂಶ ಕಳುಹಿಸಿದೆ. ಡಿಜಿ ಲಾಕರ್‌ನಲ್ಲಿ ಅಂಕಪಟ್ಟಿಯನ್ನು ಪಡೆಯಲು ಅವಕಾಶ ಕಲ್ಪಿಸಿದೆ.

Banner Ad