ಸುದ್ದಿ ಕನ್ನಡ ವಾರ್ತೆ
ಬೆಂಗಳೂರು: ದ್ವಿತೀಯ ಪಿಯುಸಿ ಫಲಿತಾಂಶ ಗುರುವಾರ ಪ್ರಕಟಗೊಂಡಿದ್ದು, ಶೇ. 86.48 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು, ಕಳೆದ ಬಾರಿಗಿಂತ ಈ ಬಾರಿ ಶೇ. 13.03 ಫಲಿತಾಂಶ ಹೆಚ್ಚಳವಾಗಿದೆ.
ಉಡುಪಿ ಜಿಲ್ಲೆ ಶೇ. 96.39 ಫಲಿತಾಂಶದೊಂದಿಗೆ ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದಿದ್ದು, ಶೇ. 96.35
ಫಲಿತಾಂಶದೊಂದಿಗೆ ದಕ್ಷಿಣ ಕನ್ನಡ ಜಿಲ್ಲೆ ದ್ವಿತೀಯ ಸ್ಥಾನ ಪಡೆದಿದೆ. ಉತ್ತರ ಕನ್ನಡ- ಶೇ.91.78 ಅಂಕದೊಂದಿಗೆ ತೃತೀಯ ಸ್ಥಾನ ಪಡೆದಿದೆ. ಇನ್ನು ಶೇ. 71.21 ಫಲಿತಾಂಶದೊಂದಿಗೆ ಯಾದಗಿರಿ ಕೊನೆಯ ಸ್ಥಾನ ಗಳಿಸಿದೆ.
ಈ ಬಾರಿ ಒಟ್ಟು 6,48,853 ಮಂದಿ ಪರೀಕ್ಷೆಗೆ ನೋಂದಾವಣೆ ಮಾಡಿಕೊಂಡಿದ್ದರು. 16,653
ಮಂದಿ ಪರೀಕ್ಷೆಗೆ ಹಾಜರಾಗಿಲ್ಲ. ಎಂದಿನಂತೆ ಹುಡುಗಿಯರೇ ಮೇಲುಗೈ ಸಾಧಿಸಿದ್ದು, ಶೇ.88.70 ಬಾಲಕಿಯರು ಉತ್ತೀರ್ಣರಾಗಿದ್ದು, ಶೇ. 83.65 ಬಾಲಕರು ಉತ್ತೀರ್ಣರಾಗಿದ್ದಾರೆ. ನಗರ ಭಾಗದಲ್ಲಿ ಶೇ. 85 ವಿದ್ಯಾರ್ಥಿಗಳು ಉತ್ತೀರ್ಣರಾದರೆ, ಗ್ರಾಮೀಣ ಪ್ರದೇಶದಲ್ಲಿ ಶೇ. 87,62 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.
