Banner Ad

ಸುದ್ದಿ ಕನ್ನಡ ವಾರ್ತೆ

ಯಾದಗಿರಿ:ಜಿಲ್ಲೆಯ ಸುರಪುರದ ಬಳಿ ಭೀಕರ ಅಪಘಾತ ಸಂಭವಿಸಿದೆ. ಕಾರು ಮತ್ತು ಖಾಸಗಿ ಬಸ್‌ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಕಾರಿನಲ್ಲಿದ್ದ 7 ಮಂದಿ ಸಜೀವ ದಹನವಾಗಿದ್ದಾರೆ.ಸುರಪುರದ ಬಳಿ ಕಾರು-ಖಾಸಗಿ ಬಸ್ ಡಿಕ್ಕಿಯಾಗಿದ್ದು, ಈ ರಭಸಕ್ಕೆ ಎರಡು ವಾಹನಗಳು ಹೊತ್ತಿ ಉರಿದಿವೆ. ಬಳಿಕ ಸ್ಥಳಕ್ಕೆ ಬಂದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸುವಲ್ಲಿ ಹರಸಾಹಸಪಟ್ಟಿದೆ.ಬೆಂಗಳೂರಿನಿಂದ ಕಲಬುರಗಿಗೆ ಹೊರಟಿದ್ದ ಬಸ್ ಹಾಗೂ ಕಲಬುರಗಿಯಿಂದ ಲಿಂಗಸೂಗೂರಿನ ಕಡೆಗೆ ಪ್ರಯಾಣಿಸುತ್ತಿದ್ದ ಕಾರಿನ ನಡುವೆ ಭೀಕರ ಅಪಘಾತ ಸಂಭವಿಸಿ ಕಾರಿನಲ್ಲಿದ್ದವರು ಸಜೀವದಹನವಾಗಿದ್ದಾರೆ. ಹಲವು ಪ್ರಯಾಣಿಕರು ಗಂಭೀರ ಗಾಯಗೊಂಡಿದ್ದು, ಅವರನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನಾ ಸ್ಥಳಕ್ಕೆ ಸುರಪುರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಮೃತಪಟ್ಟವರ ಮಾಹಿತಿ ಕಲೆ ಹಾಕುತ್ತಿದ್ದಾರೆ ಎನ್ನಲಾಗಿದೆ.

Banner Ad
Banner Ad