ಸುದ್ದಿ ಕನ್ನಡ ವಾರ್ತೆ

ಬೆಂಗಳೂರು:ಧಾರವಾಡ ಜಿಲ್ಲಾ ಪಂಚಾಯತ್ ಸದಸ್ಯರಾಗಿದ್ದ ಬಿಜೆಪಿ ಮುಖಂಡ ಯೋಗೇಶ್ ಗೌಡ ಅವರ ಕೊಲೆ ಪ್ರಕರಣದಲ್ಲಿ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಸೇರಿದಂತೆ 16 ಆರೋಪಿಗಳಿಗೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಜೀವಾವಧಿ ಶಿಕ್ಷೆ ವಿಧಿಸಿ ಇಂದು (17ಏಪ್ರಿಲ್ 2026) ತೀರ್ಪು ನೀಡಿದೆ.
ಪ್ರಕರಣದ ಮುಖ್ಯಾಂಶಗಳು:
ಘಟನೆ: ಜೂನ್ 15, 2016 ರಂದು ಧಾರವಾಡದ ಸಪ್ತಾಪುರದಲ್ಲಿರುವ ತಮ್ಮದೇ ಜಿಮ್‌ನಲ್ಲಿ ಯೋಗೇಶ್ ಗೌಡ ಅವರನ್ನು ಭೀಕರವಾಗಿ ಹತ್ಯೆ.
ಶಿಕ್ಷೆ: ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಶಾಸಕ ವಿನಯ್ ಕುಲಕರ್ಣಿ ಸೇರಿದಂತೆ 16 ಮಂದಿಯನ್ನು ಅಪರಾಧಿಗಳೆಂದು ಘೋಷಿಸಿ ಜೀವಾವಧಿ ಶಿಕ್ಷೆ ಮತ್ತು
ಇತರ ಶಿಕ್ಷೆ: ಪ್ರಕರಣದಲ್ಲಿ ಸಾಕ್ಷ್ಯ ನಾಶಪಡಿಸಿದ ಆರೋಪದ ಮೇಲೆ ಇನ್ಸ್‌ಪೆಕ್ಟ‌ರ್ ಚನ್ನಕೇಶವ ಟಿಂಕರಿಕರ್‌ಗೆ 7 ವರ್ಷಗಳ ಜೈಲು ಶಿಕ್ಷೆ ವಿಧಿಸಲಾಗಿದೆ
ತನಿಖೆ: ಮೊದಲು ಸ್ಥಳೀಯ ಪೊಲೀಸರಿಂದ ತನಿಖೆ ನಡೆಸಲ್ಪಟ್ಟ ಈ ಪ್ರಕರಣವನ್ನು ನಂತರ ಸಿಬಿಐಗೆ (CBI) ವಹಿಸಲಾಗಿತ್ತು. ಸಿಬಿಐ ಸುದೀರ್ಘ ತನಿಖೆ ನಡೆಸಿ ದೋಷಾರೋಪ ಪಟ್ಟಿ ಸಲ್ಲಿಸಿತ್ತು.ಯೋಗೀಶ ಗೌಡ ಕೊಲೆ ಪ್ರಕರಣದಲ್ಲಿ ಶಾಸಕ ವಿನಯ್ ಕುಲಕರ್ಣಿ ಸೇರಿ 17 ಮಂದಿಯನ್ನು ದೋಷಿಗಳೆಂದು ತೀರ್ಮಾನಿಸಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾಯಾಧೀಶರಾದ ಸಂತೋಷ್ ಗಜಾನನ ಭಟ್ ಅವರು ಬುಧವಾರ ತೀರ್ಪು ನೀಡಿದ್ದರಲ್ಲದೆ, ಶಿಕ್ಷೆಯ ಪ್ರಮಾಣ ನಿಗದಿಪಡಿಸಲು ಪ್ರಕರಣದ ವಿಚಾರಣೆಯನ್ನು ಗುರುವಾರಕ್ಕೆ ಮುಂದೂಡಿದ್ದರು. ಇದೀಗ ತೀರ್ಪು ಪ್ರಕಟವಾಗಿದೆ.