ಸುದ್ಧಿಕನ್ನಡ ವಾರ್ತೆ
ಬೆಂಗಳೂರು: ಕರ್ನಾಟಕ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆ ಚುರುಕುಗೊಂಡಿದ್ದು, ಕಳೆದ ಸುಮಾರು ಒಂದು ತಿಂಗಳಿಂದ ಮಳೆಯಿಲ್ಲದೆಯೇ ಬರಗಾಲದ ಬಿಸಿಲನ್ನೇ ಕಂಡಿದ್ದ ಉತ್ತರ ಒಳನಾಡಿ ಭಾಗದಲ್ಲಿಯೂ ಇದೀಗ ವರುಣ ಕೃಪೆ ತೋರಿದ್ದಾನೆ. ಜುಲೈ 11 ರ ವರೆಗೆ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.
ಉತ್ತರಕನ್ನಡ, ದಕ್ಷಿಣ ಕನ್ನಡ, ವಿಜಯಪುರ, ರಾಯಚೂರು, ಧಾರವಾಡ , ಶಿವಮೊಗ್ಗ ಮತ್ತು ಕೊಡಗು ಜಿಲ್ಲೆ ಸೇರಿದಂತೆ 11 ಜಿಲ್ಲೆಗಳಲ್ಲಿ ಅತ್ಯಧಿಕ ಮಳೆಯಾಗಿದೆ.
ಪಶ್ಚಿಮ ಘಟ್ಟಗಳಲ್ಲಿ ಭಾರಿ ಮಳೆಯಾಗುತ್ತಿರುವ ಕಾರಣ ತುಂಗಾ ಜಲಾಶಯ ಹಾಗೂ ಮಹಾರಾಷ್ಟ್ರದಲ್ಲಿ ಭಾರಿ ಮಳೆಯಾಗುತ್ತಿರುವ ಕಾರಣ ಕೃಷ್ಣಾ ನದಿಯ ಒಳಹರಿವಿನಲ್ಲಿ ಭಾರಿ ಏರಿಕೆಯಾಗಿದೆ. ಹಲವೆಡೆ ಪ್ರವಾಹ ಪರಿಸ್ಥಿತಿ ಎದುರಾಗಿದೆ.
