Banner Ad

ಸುದ್ದಿ ಕನ್ನಡ ವಾರ್ತೆ
​ಬೆಂಗಳೂರು: ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ತಮ್ಮ ಸ್ಥಾನಕ್ಕೆ ಶುಕ್ರವಾರ ರಾಜೀನಾಮೆ ನೀಡಿದರು.

ವಿಧಾನ ಪರಿಷತ್‌ನ ಸಭಾಪತಿ ಸ್ಥಾನಕ್ಕೆ ಸ್ವಇಚ್ಛೆಯಿಂದ ರಾಜೀನಾಮೆ ಸಲ್ಲಿಸುತ್ತಿರುವುದಾಗಿ ಅವರು ತಮ್ಮ ರಾಜೀನಾಮೆ ಪತ್ರದಲ್ಲಿ ತಿಳಿಸಿದ್ದಾರೆ.
​ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಜೊತೆ ಸುಮಾರು 10 ನಿಮಿಷಗಳ ಕಾಲ ಅವರು ಮಾತುಕತೆ ನಡೆಸಿದರು.

Banner Ad

​ಮುಖ್ಯಮಂತ್ರಿ ಶಿವಕುಮಾರ್ ಅವರು ರಾಜೀನಾಮೆ ನೀಡುವಂತೆ ಮನವಿ ಮಾಡಿದ ಹಿನ್ನೆಲೆಯಲ್ಲಿ ಹೊರಟ್ಟಿ ಈ ನಿರ್ಧಾರ ಕೈಗೊಂಡಿದ್ದಾರೆ ಎಂದು ಹೇಳಲಾಗಿದೆ. 75 ಸದಸ್ಯ ಬಲದ ವಿಧಾನ ಪರಿಷತ್‌ನಲ್ಲಿ ಕಾಂಗ್ರೆಸ್ ಬಹುಮತ ಪಡೆದಿರುವ ಹಿನ್ನೆಲೆಯಲ್ಲಿ, ಸಭಾಪತಿ ಮತ್ತು ಉಪಸಭಾಪತಿ ಎರಡೂ ಹುದ್ದೆಗಳನ್ನು ತಮ್ಮ ಆಡಳಿತ ಪಕ್ಷದಿಂದ ಆಯ್ಕೆ ಮಾಡಲು ಕಾಂಗ್ರೆಸ್ ಮುಂದಾಗಿದೆ. ಇದರ ನಡುವೆಯೇ ಬಸವರಾಜ ಹೊರಟ್ಟಿ ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ. ಯಾವುದೇ ಒತ್ತಡವಿಲ್ಲದೆ, ಸಂಪೂರ್ಣ ಸ್ವಇಚ್ಛೆಯಿಂದಲೇ ತಾವು ಸಭಾಪತಿ ಸ್ಥಾನಕ್ಕೆ ರಾಜೀನಾಮೆ ನೀಡಿರುವುದಾಗಿ ಹೊರಟ್ಟಿ ರಾಜೀನಾಮೆ ಪತ್ರದಲ್ಲಿ ತಿಳಿಸಿದ್ದಾರೆ.

Banner Ad