Banner Ad

ಸುದ್ದಿ ಕನ್ನಡ ವಾರ್ತೆ
ಬೆಂಗಳೂರಿನಿಂದ ಸಾಗರಕ್ಕೆ ತೆರಳುತ್ತಿದ್ದ ಖಾಸಗಿ ಬಸ್ಸಂದು ರಾಷ್ಟ್ರೀಯ ಹೆದ್ದಾರಿ 69ರ ಆನಂದಪುರ ಸಮೀಪ ಸಾಗರ ರಸ್ತೆಯ ಮುಂಬಾಳ್ ಬಳಿ ಆಕಸ್ಮಿಕವಾಗಿ ಬೆಂಕಿ ತೆಗೆದುಕೊಳ್ಳಿ ಬಸ್ಸು ಸಂಪೂರ್ಣ ಸುಟ್ಟಿ ಹೋದ ಘಟನೆ ಗುರುವಾರ ಬೆಳಗಿನ ಜಾವ ನಡೆದಿದೆ.

Banner Ad

ಬೆಂಗಳೂರಿನಿಂದ ಸಾಗರಕ್ಕೆ ತರುಳುತ್ತಿದ್ದ ಖಾಸಗಿ ಬಸ್ ನಲ್ಲಿ ಕೇವಲ ಇಬ್ಬರೂ ಪ್ರಯಾಣಿಕರಿದ್ದು ಚಾಲಕ ಮತ್ತು ನಿರ್ವಾಹಕ ಸೇರಿ ನಾಲ್ವರು ಪ್ರಾಣಪಾಯದಿಂದ ಪಾರಾಗಿದ್ದಾರೆ.

ವಿಷಯ ತಿಳಿದ ಆನಂದಪುರ ಪೊಲೀಸ್ ಠಾಣೆಯ ಪಿಎಸ್ಐ ಪ್ರವೀಣ್ ತಂಡ ಸ್ಥಳಕ್ಕೆ ಧಾವಿಸಿ ಬೇರೆ ವಾಹನಗಳಿಗೆ ತೊಂದರೆಯಾಗದಂತೆ ಸುರಕ್ಷತೆ ಬಗ್ಗೆ ಕ್ರಮವಹಿಸಿದ್ದಾರೆ.

ಬಸಿಗೆ ಬೆಂಕಿ ತಗಲಿದ ತಕ್ಷಣ ಸಾಗರ ಅಗ್ನಿಶಾಮಕ ದಳದವರು ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸಿದ್ದಾರೆ. ಈ ಪ್ರಕರಣ ಪೊಲೀಸ್ ಠಾಣೆಯಲ್ಲಿ ದಾಖಲಿಸಲಾಗಿದೆ.

Banner Ad