ಸುದ್ಧಿಕನ್ನಡ ವಾರ್ತೆ
ಬೆಂಗಳೂರು: ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಫೆಬ್ರುವರಿ 1 ರಿಂದ ಮತ್ತೆ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಫೆಬ್ರುವರಿ 1 ರಿಂದ ಎರಡು ದಿನಗಳ ಕಾಲ ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ಮೈಸೂರು,ಮಂಡ್ಯ, ತುಮಕೂರು,ಶಿವಮೊಗ್ಗ,ರಾಮನಗರ, ಕೋಲಾರ,ಹಾಸನ, ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಗದಗ, ಧಾರವಾಡ, ಬಾಗಲಕೋಟೆ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾನಾನ ಇಲಾಖೆ ಮುನ್ಸೂಚನೆ ನೀಡಿದೆ.

ಕರ್ನಾಟಕದಲ್ಲಿ ಸದ್ಯ ಹೆಚ್ಚಿನ ಪ್ರಮಾಣದಲ್ಲಿ ಚಳಿಯಾಗುತ್ತಿದ್ದು, ಇದೀಗ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.