ಸುದ್ದಿ ಕನ್ನಡ ವಾರ್ತೆ

ಬೆಳಗಾವಿ ಸಾಹಿತ್ಯ ಬಳಗದ ಅಧ್ಯಕ್ಷರು, ಬಳ್ಳಾರಿಯ ಶೆಟ್ರ ಗುರುಶಾಂತಪ್ಪ ಸಂಯುಕ್ತ ಪದವಿ ಪೂರ್ವ ಮಹಾವಿದ್ಯಾಲಯದ ತರ್ಕಶಾಸ್ತ್ರ ಉಪನ್ಯಾಸಕರಾದ ಡಾ. ಸಂತೋಷ ಶಂಕರೆಪ್ಪ ಯಕ್ಕುಂಡಿ(ಬೆಳವಡಿ)ಅವರಿಗೆ ಆಜೂರ ಪ್ರಕಾಶನದ ಪ್ರಶಸ್ತಿ ಪುರಸ್ಕೃತರಾದ ನಿಮಿತ್ತ ಭಾರತ ಸ್ವಾತಂತ್ರ್ಯದ ಬೆಳ್ಳಿಚುಕ್ಕಿ ಕನ್ನಡತಿ ವೀರ ರಾಣಿ ಕಿತ್ತೂರು ಚೆನ್ನಮ್ಮಾಜಿ ಅವರ ಐಕ್ಯ ಸ್ಥಳದಲ್ಲಿ ಕರ್ನಾಟಕ ಸರ್ಕಾರದ ಧಾರವಾಡ ರಂಗಾಯಣದ ನಿಕಟಪೂರ್ವ ನಿರ್ದೇಶಕರು, ಖ್ಯಾತ ಚಲನಚಿತ್ರ ನಟ, ನಿರ್ಮಾಪಕ ಶ್ರೀ ರಮೇಶ ಸೂರನಾಯ್ಕ ಪರವಿನಾಯ್ಕರ ಅವರು ಕೇಂದ್ರ ಬಸವ ಸಮಿತಿಯ ವತಿಯಿಂದ ವಚನ ಗ್ರಂಥ ನೀಡಿ ಸನ್ಮಾನಿಸಿ, ಅಭಿನಂದಿಸಿದರು.

ಕನ್ನಡ ಸಾಹಿತ್ಯ ಪರಿಷತ್ತಿನ ಬೆಳಗಾವಿ ಜಿಲ್ಲೆಯ ಮಾಜಿ ಅದ್ಯಕ್ಷರಾದ ಶ್ರೀ ಮೋಹನ ಬಸನಗೌಡ ಪಾಟೀಲ, ಕನ್ನಡ ಜಾನಪದ ಪರಿಷತ್ತಿನ ಬೈಲಹೊಂಗಲ ತಾಲೂಕಿನ ಅಧ್ಯಕ್ಷರಾದ ಶ್ರೀ ಚಂದ್ರಶೇಖರ ರುದ್ರಪ್ಪ ಕೊಪ್ಪದ ಮತ್ತು ಮಾಧ್ಯಮ ಪ್ರತಿನಿಧಿ ಶ್ರೀ ಮಹಾಂತೇಶ ಮಲ್ಲಪ್ಪ ರಾಜಗೊಳಿ ಉಪಸ್ಥಿತರಿದ್ದರು.