ಸುದ್ದಿಕನ್ನಡ ವಾರ್ತೆ
ಗುಜರಾತ್: ಆಯಸ್ಸು ಗಟ್ಟಿಯಾಗಿದ್ದರೆ ಎಷ್ಟೇ ದೊಡ್ಡ ಅಪಾಯ ಸಂಭವಿಸಿದರೂ ಅದರಿಂದ ಕೂಡ ಕೂದಲೆಳೆ ಅಂತರದಲ್ಲಿ ಪಾರಾಗಿ ಬದುಕುತ್ತಾರೆ ಎಂಬ ಮಾತು ಅನೇಕ ಸಲ ಸತ್ಯವಾಗಿರುವುದು ನಾವೆಲ್ಲ ಕೇಳಿದ್ದೇವೆ. ಇದೀಗ ಈ ಮಾತಿಗೆ ಅಹಮದಾಬಾದ್ ನಲ್ಲಿ ಸಂಭವಿಸಿದ ವಿಮಾನ ದುರಂತದ ವೇಳೆ ಕೂದಲೆಳೆ ಅಂತರದಲ್ಲಿ ಬದುಕುಳಿದ ಭೂಮಿ ಚೌಹಾಣ್ ಮತ್ತು ರೋಹನ್ ಬಗಾಡೆಯೇ (Bhumi Chauhan and Rohan Bagadeye) ಸಾಕ್ಷಿಯಾಗಿದ್ದಾರೆ.
ಗುರುವಾರ ಮಧ್ಯಾನ್ಹ ಏರ್ ಇಂಡಿಯಾದಲ್ಲಿ ತೆರಳಬೇಕಿದ್ದ ಭೂಮಿ ಏಪೆರ್Çೀರ್ಟ್ ಗೆ ತಲುಪುವುದು ಟ್ರಾಫಿಕ್ ಜಾಮ್ ನಿಂದ 10 ನಿಮಿಷ ತಡವಾಗಿದ್ದಕ್ಕೆ (10 minutes delay due to traffic jam) ಜೀವ ಉಳಿಸಿಕೊಂಡಿದ್ದಾರೆ. ಮತ್ತೊಂದೆಡೆ ಹಾಸ್ಟೆಲ್ ಮೆಸ್‍ನಿಂದ 15 ನಿಮಿಷ ಮುಂಚೆ ತೆರಳಿದ್ದಕ್ಕೆ ರೋಹನ್ ಬದುಕುಳಿದಿದ್ದಾರೆ. ಅಹಮದಾಬಾದ್ ನಿಂದ ಲಂಡನ್ ಗೆ ತೆರಳಬೇಕಿದ್ದ ಭೂಮಿ ಟ್ರಾಫಿಕ್ ಕಾರಣದಿಂದ ವಿಮಾನ ನಿಲ್ದಾಣಕ್ಕೆ 10 ನಿಮಿಷ ತಡವಾಗಿ ಬಂದಿದ್ದರು. ಇದು ಅವರ ಜೀವ ಉಳಿಯಲು ಕಾರಣವಾಗಿದೆ.
ಮತ್ತೊಂದು ಘಟನೆಯಲ್ಲಿ ಬಿ.ಜೆ ಆಸ್ಪತ್ರೆಯ ಇಂಟರ್ನಿ ರೋಹನ್ ಬಗಾಡೆ ಸ್ವಲ್ಪದರಲ್ಲೇ ಅಪಾಯದಿಂದ ಪಾರಾಗಿದ್ದಾರೆ. ರೋಹನ್ ರವರು ದುರಂತ ನಡೆದ ಹಾಸ್ಟೆಲ್‍ನಲ್ಲಿದ್ದರು. ದುರಂತಕ್ಕೂ ಕೇವಲ 15 ನಿಮಿಷದ ಮುನ್ನ ಊಟ ಮಾಡಿ ಮೆಸ್ ನಿಂದ ತೆರಳಿದ್ದರಿಂದ ಜೀವ ಉಳಿಸಿಕೊಂಡಿದ್ದಾರೆ.