ಸುದ್ದಿಕನ್ನಡ ವಾರ್ತೆ
ಅಹಮದಾಬಾದ್: ಗುಜರಾತ್ ನ ಅಹಮದಾಬಾದ ವಿಮಾನ ನಿಲ್ದಾಣದ ಬಳಿ ಗುರುವಾರ ಮಧ್ಯಾನ್ಹ ಏರ್ ಇಂಡಿಯಾ ವಿಮಾನ ಪತನವಾಗಿದ್ದು, ಒಬ್ಬ ಪ್ರಯಾಣಿಕ ಹೊರತುಪಡಿಸಿ ಉಳಿದ ಎಲ್ಲಾ 241 ಪ್ರಯಾಣಿಕರು ಮತ್ತು ಸಿಬ್ಬಂದಿ ಸೇರಿದಂತೆ ಒಟ್ಟು 265 ಜನ ಮೃತಪಟ್ಟಿ ಘಟನೆ ನಡೆದಿತ್ತು. ಇದೀಗ ಈ ಘಟನೆಯ ಹೆಚ್ಚಿನ ಮಾಹಿತಿ ನೀಡಬಲ್ಲ ವಿಮಾನದ ಬ್ಲಾಕ್ ಬಾಕ್ಸ ಪತ್ತೆಯಾಗಿದೆ.(Find the plane’s black box).

ಪತನಗೊಂಡ ಏರ್ ಇಂಡಿಯಾದ ಬೋಯಿಂಗ್ 787-8 ಡ್ರೀಮ್‍ಲೈನರ್ ವಿಮಾನದ ಬ್ಲ್ಯಾಕ್ ಬಾಕ್ಸ್ ಇಂದು ಪತ್ತೆಯಾಗಿದೆ. ಲಭ್ಯವಾದ ಮಾಹಿತಿಯ ಪ್ರಕಾರ- ನಾಗರಿಕ ವಿಮಾನಯಾನ ನಿರ್ದೇಶನಾಲಯದ ತಂಡ ಅಹಮದಾಬಾದ್ ನ ಸರ್ದಾರ್ ವಲ್ಲಭಭಾಯಿ ಪಟೇಲ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಬಳಿಯ ಜನದಟ್ಟಣೆಯ ಮೇಘನಿನಗರ ಪ್ರದೇಶದಲ್ಲಿ ಒಂದು ಬ್ಲ್ಯಾಕ್ ಬಾಕ್ಸ್ ವಶಪಡಿಸಿಕೊಂಡಿದೆ. ಇಲ್ಲಿಯೇ ಬೋಯಿಂಗ್ 787 ಡ್ರೀಮ್‍ಲೈನರ್ ವಿಮಾನ ಪತನಗೊಂಡಿತ್ತು.

ಆದರೆ ಬ್ಲ್ಯಾಕ್ ಬಾಕ್ಸ್ ವಶಪಡಿಸಿಕೊಂಡಿರುವ ಬಗ್ಗೆ ವಿಮಾನಯಾನ ಸಂಸ್ಥೆ ಇನ್ನೂ ದೃಢಪಡಿಸಿಲ್ಲ. ಬ್ಲ್ಯಾಕ್ ಬಾಕ್ಸ್ ಇದು ವಿಮಾನ ಹಾರಾಟದ ಸಮಯದಲ್ಲಿ ವಿಮಾನದ ಬಗ್ಗೆ ಮಾಹಿತಿಯನ್ನು ದಾಖಲಿಸುವ ಒಂದು ಸಣ್ಣ ಸಾಧನವಾಗಿದೆ. ಇದು ವಿಮಾನ ಅಪಘಾತಗಳ ತನಿಖೆಗೆ ಸಹಾಯ ಮಾಡುತ್ತದೆ.
ಈ ಕಪ್ಪು ಪೆಟ್ಟಿಗೆಯು ಅಹಮದಾಬಾದ್ ಬಳಿ 241 ಜನರ ಸಾವಿಗೆ ಕಾರಣವಾದ ನಿಗೂಢ ಅಪಘಾತದ ಬಗ್ಗೆ ಪ್ರಮುಖ ಸುಳಿವುಗಳನ್ನು ಹೊಂದಿದೆ ಎನ್ನಲಾಗುತ್ತಿದೆ.