Banner Ad

ಸುದ್ದಿಕನ್ನಡ ವಾರ್ತೆ
ನವದೆಹಲಿ: ಇರಾನ್-ಇಸ್ರೇಲ್ ಸಂಘರ್ಷದ ನಡುವೆ ಟೆಹರಾನ್ ನಲ್ಲಿರುವ ಭಾರತೀಯ ರಾಯಭಾರ ಕಚೇರಿ ನಿರಂತರವಾಗಿ ಸುರಕ್ಷತೆ ಪರಿಸ್ಥಿತಿಯನ್ನು ಪರಿಶೀಲಿಸುತ್ತಿದ್ದು, ಇರಾನ್ ನಲ್ಲಿರುವ ಭಾರತೀಯ ವಿದ್ಯಾರ್ಥಿಗಳೊಂದಿಗೆ ಸಂಪರ್ಕದಲ್ಲಿದೆ. ಕೆಲ ಸಂದರ್ಭಗಳಲ್ಲಿ ಅವರನ್ನು ಸುರಕ್ಷತಾ ಜಾಗಕ್ಕೆ ಸ್ಥಳಾಂತರಿಸಲಾಗಿದೆ ಎಂದು ಕೇಂದ್ರ ಸರ್ಕಾರ ಸೋಮವಾರ ಹೇಳಿದೆ,

ಟೆಹರಾನ್ ನಲ್ಲಿರುವ ಭಾರತೀಯ ರಾಯಭಾರ ಕಚೇರಿ ನಿರಂತರವಾಗಿ ಸುರಕ್ಷತೆ ಪರಿಸ್ಥಿತಿಯನ್ನು ಪರಿಶೀಲಿಸುತ್ತಿದೆ. ಇರಾನ್ ನಲ್ಲಿರುವ ಭಾರತೀಯ ವಿದ್ಯಾರ್ಥಿಗಳಿಗೆ ಸುರಕ್ಷತೆ ಒದಗಿಸಲು ಅವರೊಂದಿಗೆ ಸಂಪರ್ಕದಲ್ಲಿರುವುದಾಗಿ ವಿದೇಶಾಂಗ ವ್ಯವಹಾರಗಳ ಸಚಿವಾಲಯ ತಿಳಿಸಿದೆ.
ಇಸ್ರೇಲ್ ಮತ್ತು ಇರಾನ್‍ನಲ್ಲಿರುವ ಭಾರತೀಯ ರಾಯಭಾರ ಕಚೇರಿಗಳು ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಸಲಹೆಗಳನ್ನು ನೀಡುತ್ತಿವೆ. ಇರಾನ್ ನಲ್ಲಿನ ಪ್ರಸ್ತುತ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು, ಎಲ್ಲಾ ಭಾರತೀಯ ಪ್ರಜೆಗಳು ಮತ್ತು ಇರಾನ್ ನಲ್ಲಿರುವ ಭಾರತೀಯ ಮೂಲದ ವ್ಯಕ್ತಿಗಳು ಜಾಗರೂಕರಾಗಿರಲು ಸೂಚಿಸಲಾಗಿದೆ.

Banner Ad

ರಾಯಭಾರ ಕಚೇರಿಯ ನೆರವಿನೊಂದಿಗೆ ಇರಾನ್‍ನೊಳಗೆ ಸುರಕ್ಷಿತ ಸ್ಥಳಗಳಿಗೆ ವಿದ್ಯಾರ್ಥಿಗಳನ್ನು ಸ್ಥಳಾಂತರಿಸಲಾಗುತ್ತಿದೆ. ಇತರ ಆಯ್ಕೆಗಳ ಕುರಿತ ಚರ್ಚಿಸಲಾಗುತ್ತಿದೆ. ರಾಯಭಾರ ಕಚೇರಿಯು ಕಲ್ಯಾಣ ಮತ್ತು ಸುರಕ್ಷತೆಗೆ ಸಂಬಂಧಿಸಿದಂತೆ ಸಮುದಾಯದ ಮುಖಂಡರೊಂದಿಗೆ ಸಂಪರ್ಕದಲ್ಲಿದೆ ಎಂದು ಹೇಳಿದೆ.

 

Banner Ad