ಸುದ್ಧಿಕನ್ನಡ ವಾರ್ತೆ
ಕನ್ನಡ ಚಿತ್ರರಂಗದ ಖ್ಯಾತ ಹಾಸ್ಯ ನಟ ಎಂ.ಎಸ್.ಉಮೆಶ್ ಭಾನುವಾರ ನಿಧನರಾಗಿದ್ದಾರೆ. ಇತ್ತೀಚೆಗೆ ಅವರು ಅನಾರೋಗ್ಯದ ಹಿನ್ನೆಲೆಯಲ್ಲಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಉಮೇಶ್ ರವರಿಗೆ ಕ್ಯಾನ್ಸರ್ ಇರುವುದನ್ನು ವೈದ್ಯರು ದೃಢಪಡಿಸಿದ್ದರು. ಚಿಕಿತ್ಸೆ ಫಲಿಸದೆ ಅವರು ಕಿದ್ವಾಯಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. 350 ಕ್ಕೂ ಹೆಚ್ಚು ಚಲನಚಿತ್ರಗಳಲ್ಲಿ ಅವರು ಅಭಿನಯಿಸಿದ್ದರು.
ಇತ್ತೀಚೆಗಷ್ಟೇ ಅವರು ಮನೆಯಲ್ಲಿ ಆಯತಪ್ಪಿ ಬಿದ್ದು ಆಸ್ಪತ್ರೆಗೆ ದಾಖಲಾಗಿದ್ದರು. ಅಂದು ಸ್ಕ್ಯಾನಿಂಗ ಮಾಡಿದಾಗ ಅವರಿಗೆ ಕ್ಯಾನ್ಸರ್ ಮೂರನೇಯ ಸ್ಟೇಜ್ ನಲ್ಲಿರುವುದು ದೃಢಪಟ್ಟಿತ್ತು. ಆದರೆ ದುರಾದೃಷ್ಠವಶಾತ್ ಇಂದು ಕೊನೆಯುಸಿರೆಳೆದರು. ಉಮೇಶ್ ರವರ ದೇಹದ ಕೆಲ ಭಾಗಕ್ಕೆ ಕ್ಯಾನ್ಸರ್ ಹರಡಿಕೊಂಡಿದ್ದು ಸರ್ಜರಿ ಕಷ್ಟ ಎಂದು ಹೇಳಿದ್ದರು.
