ಸುದ್ಧಿಕನ್ನಡ ವಾರ್ತೆ
ಬಾರಾಮತಿಯಲ್ಲಿ ಸಂಭವಿಸಿದ ಭೀಕರ ವಿಮಾನ ಅಪಘಾತದಲ್ಲಿ ಮಹಾರಾಷ್ಟ್ರ ರಾಜ್ಯದ ಉಪಮುಖ್ಯಮಂತ್ರಿ ಅಜಿತ್ ಪವಾರ್ ಸೇರಿದಂತೆ 5 ಜನ ಪ್ರಯಾಣಿಕರು ಸಾವನ್ನಪ್ಪಿದ್ದಾರೆ ಎಂದು ನಾಗರೀಕ ವಿಮಾನಯಾನ ನಿರ್ದೇಶನಾಲಯ ಮಾಹಿತಿ ನೀಡಿದೆ.

ಮಹಾರಾಷ್ಟ್ರ ರಾಜ್ಯದ ಉಪಮುಖ್ಯಮಂತ್ರಿ ಅಜಿತ್ ಪವಾರ್ ರವರು ಪ್ರಯಾಣಿಸುತ್ತಿದ್ದ ವಿಮಾನವು ಬುಧವಾರ ಬೆಳಿಗ್ಗೆ ಬಾರಾಮತಿಯಲ್ಲಿ ಲ್ಯಾಂಡಿಂಗ್ ಸಂದರ್ಭದಲ್ಲಿ ಪತನಗೊಂಡಿದೆ. ಜಿ.ಪಂ ಚುನಾವಣೆಯ ಹಿನ್ನೆಲೆಯಲ್ಲಿ ಪ್ರಚಾರಕ್ಕೆ ತೆರಳಿದ್ದ ಸಂದರ್ಭದಲ್ಲಿ ಈ ಅವಘಡ ಸಂಭವಿಸಿದೆ. ಈ ದುರ್ಘಟನೆಯಲ್ಲಿ ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಸಾವನ್ನಪ್ಪಿದ್ದಾರೆ.

 

ಅಜಿತ್ ಪವಾರ್ ನಿಧನಕ್ಕೆ ಗಣ್ಯರು ಸಂತಾಪ ಸೂಚಿಸಿದ್ದಾರೆ.À್ಕರ್ನಾಟಕದ ಮಾಜಿ ಮುಖ್ಯಮಂತ್ರಿ ಹಾಗೂ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ರವರು ಸಂತಾಪ ಸೂಚಿಸಿದ್ದು ಅಜಿತ್ ಪವಾರ್ ರವರ ಈ ಅಕಾಲಿಕ ನಿಧನದ ಸುದ್ಧಿ ಕೇಳಿ ನನಗೆ ತೀವ್ರ ಆಘಾತವುಂಟಾಯಿತು ಎಂದು ಕಂಬನಿ ಮಿಡಿದಿದ್ದಾರೆ.