Banner Ad

ಸುದ್ದಿ ಕನ್ನಡ ವಾರ್ತೆ
​ಜಮ್ಮು-ಕಾಶ್ಮೀರ:ಪವಿತ್ರ ಅಮರನಾಥ ಗುಹಾ ದೇವಾಲಯಕ್ಕೆ 2026ರ ಅಮರನಾಥ ಯಾತ್ರೆ ಶುಭಾರಂಭಗೊಂಡಿದೆ. ದೇಶದ ವಿವಿಧ ಭಾಗಗಳಿಂದ ಸಾವಿರಾರು ಭಕ್ತರು “ಬಾಬಾ ಬರ್ಫಾನಿ” ದರ್ಶನಕ್ಕಾಗಿ ಯಾತ್ರೆಯಲ್ಲಿ ಭಾಗವಹಿಸುತ್ತಿದ್ದು, ಭದ್ರತೆಯ ನಡುವೆ ಯಾತ್ರೆ ಸುಗಮವಾಗಿ ಸಾಗುತ್ತಿದೆ.
​ಈ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಯಾತ್ರಿಕರಿಗೆ ಶುಭಾಶಯಗಳನ್ನು ತಿಳಿಸಿ, ಅಮರನಾಥ ಯಾತ್ರೆ ಭಾರತದ ಶಾಶ್ವತ ಆಧ್ಯಾತ್ಮಿಕ ಪರಂಪರೆ ಹಾಗೂ ಸಾಂಸ್ಕೃತಿಕ ಏಕತೆಯ ಪ್ರತೀಕವಾಗಿದೆ ಎಂದು ಹೇಳಿದ್ದಾರೆ.

ಯಾತ್ರೆಯಲ್ಲಿ ಪಾಲ್ಗೊಳ್ಳುವ ಪ್ರತಿಯೊಬ್ಬರೂ ಸ್ವಚ್ಛತೆ, ಸುರಕ್ಷತೆ, ಪರಿಸರ ಸಂರಕ್ಷಣೆ, ಸ್ಥಳೀಯ ಆರ್ಥಿಕತೆಗೆ ಬೆಂಬಲ ಹಾಗೂ ರಾಷ್ಟ್ರಸೇವೆ ಎಂಬ ಐದು ಸಂಕಲ್ಪಗಳನ್ನು ಪಾಲಿಸಬೇಕೆಂದು ಕರೆ ನೀಡಿದ್ದಾರೆ.

Banner Ad

​ಯಾತ್ರೆಯ ಅವಧಿಯಲ್ಲಿ ಭಕ್ತರ ಸುರಕ್ಷತೆಗಾಗಿ ಕಠಿಣ ಭದ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದ್ದು, ನೊಂದಾಯಿತ ಯಾತ್ರಿಕರಿಗೆ ಮಾತ್ರ ಪ್ರವೇಶ ನೀಡಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Banner Ad