ಸುದ್ದಿ ಕನ್ನಡ ವಾರ್ತೆ
ನಗೋಯಾ (ಜಪಾನ್): ಜಪಾನ್‌ನಲ್ಲಿ ನಡೆಯುತ್ತಿರುವ ಐಚಿ-ನಗೋಯಾ ಏಷ್ಯನ್ ಕ್ರೀಡಾಕೂಟದಲ್ಲಿ ಭಾರತವು ತನ್ನ ಪದಕಗಳ ಖಾತೆಯನ್ನು ತೆರೆದಿದೆ.
ಮಹಿಳೆಯರ 10 ಮೀಟರ್ ಏರ್ ರೈಫಲ್ ತಂಡದ ಸ್ಪರ್ಧೆಯಲ್ಲಿ ಎಲವೆನಿಲ್ ವಲರಿವಾನ್, ಸೋನಮ್ ಮಾಸ್ಕರ್ ಮತ್ತು ವಿದರ್ಣ್ ವಿನೋದ್ ಅವರನ್ನೊಳಗೊಂಡ ಭಾರತೀಯ ಶೂಟಿಂಗ್ ತಂಡವು ಒಟ್ಟು 1898 ಅಂಕಗಳನ್ನು ಗಳಿಸುವ ಮೂಲಕ ಬೆಳ್ಳಿ ಪದಕವನ್ನು ತಮ್ಮದಾಗಿಸಿಕೊಂಡಿದೆ. ಈ ಸ್ಪರ್ಧೆಯಲ್ಲಿ ಚೀನಾ ಮೊದಲ ಸ್ಥಾನ ಪಡೆದರೆ, ಭಾರತ ಎರಡನೇ ಸ್ಥಾನದೊಂದಿಗೆ ಬೆಳ್ಳಿ ಪದಕ ಗೆದ್ದುಕೊಂಡಿದೆ.
ಅತ್ಯುತ್ತಮ ಪ್ರದರ್ಶನ ನೀಡಿದ ಎಲವೆನಿಲ್ ವಲರಿವಾನ್ 633.5 ಅಂಕಗಳನ್ನು ಗಳಿಸುವುದರ ಜೊತೆಗೆ ವೈಯಕ್ತಿಕ ಫೈನಲ್ಸ್‌ಗೂ ಪ್ರವೇಶ ಪಡೆದಿದ್ದಾರೆ. ಅವರೊಂದಿಗೆ ಸೋನಮ್ ಮಾಸ್ಕರ್ ಕೂಡ ಫೈನಲ್‌ಗೆ ಲಗ್ಗೆ ಇಟ್ಟಿದ್ದಾರೆ.
